Friday, April 19, 2024
Homeಕರಾವಳಿಉಡುಪಿಶಿರೂರು ಮಠದ ನೂತನ ಯತಿಯಾಗಿ ಅಪ್ರಾಪ್ತರ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

ಶಿರೂರು ಮಠದ ನೂತನ ಯತಿಯಾಗಿ ಅಪ್ರಾಪ್ತರ ನೇಮಕ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

spot_img
- Advertisement -
- Advertisement -

ಉಡುಪಿ: ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯಾಗಿ 16 ವರ್ಷದ ಬಾಲಕನ ನೇಮಕವಾಗಿದೆ. ಈ ರೀತಿ ಅಪ್ರಾಪ್ತರನ್ನು ನೇಮಕ ಕಾನೂನುಬಾಹಿರವೆಂದು ವ್ಯಕ್ತಿಯೊಬ್ಬರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿ ಹೈಕೋರ್ಟ್ ಆದೇಶಿಸಿದೆ. ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಯತಿಯಾಗಿ ಅನಿರುದ್ಧ ಸರಳತ್ತಾಯ ಎಂಬವರನ್ನು ನೇಮಕ ಮಾಡಲಾಗಿತ್ತು. ಸೋದೆ ವಾದಿರಾಜ ಮಠದಿಂದ ನೂತನ ಪೀಠಾಧಿಪತಿ ನೇಮಕ ಮಾಡಲಾಗಿತ್ತು. ಹೀಗೆ ಅಪ್ರಾಪ್ತರ ನೇಮಕ ಮಾಡುವಂತಿಲ್ಲವೆಂದು ತಕರಾರು ಕೇಳಿಬಂದಿದೆ.

ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠಕ್ಕೆ ನೂತನ ಪೀಠಾಧಿಪತಿಯನ್ನು ಘೋಷಿಸಲಾಗಿತ್ತು. ಸೋದೆ (ವಾದಿರಾಜ) ಮಠದ ವಿಶ್ವವಲ್ಲಭ ತೀರ್ಥರು ನೂತನ ಪೀಠಾಧಿಪತಿಯ ಹೆಸರು ಘೋಷಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಧರ್ಮಸ್ಥಳದ ನಿಡ್ಲೆ ಮೂಲದ ಅನಿರುದ್ಧ್ ಸರಳತ್ತಾಯ ಮುಂದಿನ ಶ್ರೀಗಳಾಗಿ ನಿಯುಕ್ತಿಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸೋದೆ ಮಠದಲ್ಲಿ ಮೇ 11ರಿಂದ 14ರವರೆಗೆ ಶಿಷ್ಯ ಸ್ವೀಕಾರ ವಿಧಿ ವಿಧಾನಗಳು ಜರುಗಲಿವೆ ಎಂದು ತಿಳಿಸಿದ್ದರು. ಅದರಂತೆ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿದೆ.

‘ಅಷ್ಟಮಠಗಳಲ್ಲಿ ಬಾಲಸನ್ಯಾಸ ಸ್ವೀಕಾರ ಸಂಪ್ರದಾಯ ಇದೆ. ಸಂಪ್ರದಾಯದ ಪ್ರಕಾರವೇ ವಟುವಿನ ಆಯ್ಕೆ ನಡೆದಿದೆ. ಅಷ್ಟಮಠಗಳ ಯತಿಗಳಿಂದ ಸನ್ಯಾಸ ವಿಚಾರದಲ್ಲಿ ಯಾವುದೇ ಸಂವಿಧಾನ ರಚನೆಯಾಗಿಲ್ಲ. ಎಲ್ಲ ಯತಿಗಳ ಗಮನಕ್ಕೆ ತಂದು ಶಿಷ್ಯನ ಆಯ್ಕೆ ಮಾಡಿದ್ದೇವೆ’ ಎಂದು ಉಡುಪಿಯ ಶಿರೂರಿನಲ್ಲಿ ಸೋದೆ ವಿಶ್ವವಲ್ಲಭತೀರ್ಥ ಸ್ವಾಮೀಜಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

- Advertisement -
spot_img

Latest News

error: Content is protected !!