Wednesday, June 24, 2026
Homeಕರಾವಳಿಮಂಗಳೂರುಹೊಸ ವರ್ಷಾರಂಭದ ದಿನದಂದು ದ.ಕ. ಜಿಲ್ಲೆಯ ದೇವಸ್ಥಾನಗಳಲ್ಲಿ ಭಕ್ತರ ದಂಡು

ಹೊಸ ವರ್ಷಾರಂಭದ ದಿನದಂದು ದ.ಕ. ಜಿಲ್ಲೆಯ ದೇವಸ್ಥಾನಗಳಲ್ಲಿ ಭಕ್ತರ ದಂಡು

- Advertisement -
- Advertisement -

ಮಂಗಳೂರು: ಹೊಸ ವರ್ಷದ ಆರಂಭದ ದಿನದಂದು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಿಗೆ ಜನ ಸಾಗರ ಹರಿದು ಬಂದಿದೆ.ಜಿಲ್ಲೆಯ ದೇವಸ್ಥಾನಗಳಿಗೆ ಭೇಟಿ ನೀಡುವ ಮೂಲಕ ಜನರು 2025ನೇ ವರ್ಷಾರಂಭ ಮಾಡಿದ್ದಾರೆ.

ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದು ದೇವಸ್ಥಾನದ ಕೆರೆಯಲ್ಲಿ ಪವಿತ್ರ ಸ್ನಾನ ಮತ್ತು ಕಲಶ ಸ್ನಾನದಲ್ಲಿ ಭಾಗಿಯಾಗಿದ್ದಾರೆ.

ಇದೇ ವೇಳೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡಾ ಹೆಚ್ಚಿನ ಭಕ್ತರ ಸಂಖ್ಯೆ ಕಂಡು ಬಂದಿದ್ದು ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ.

ದೇವಸ್ಥಾನದ ಕ್ಯೂ ಸೆಂಟರ್ ಮತ್ತು ಮುಂಭಾಗದಲ್ಲೂ ಭಾರೀ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಸರತಿ ಸಾಲಿನಲ್ಲಿ ನಿಂತು ಮಂಜುನಾಥ ದೇವರ ದರ್ಶನ ಪಡೆದಿದ್ದಾರೆ.

ಇದಲ್ಲದೇ ಕುಕ್ಕೆ ಶ್ರೀ ಸುಬ್ರಮಣ್ಯ ದೇವಸ್ಥಾನ ಸೇರಿದಂತೆ ಜಿಲ್ಲೆಯ ಹಲವು ದೇವಸ್ಥಾನಗಳಲ್ಲಿ ಇಂದು ಭಕ್ತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದೆ.

- Advertisement -

Latest News

error: Content is protected !!