ಮಂಗಳೂರು: ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾ “ಪಿಲಿಪಂಜ”ದ ಫಸ್ಟ್ ಲುಕ್ ಪೋಸ್ಟರನ್ನು ಜ. 27 ಕ್ಕೆ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ ಬಿ ಕೆ ವಿಘ್ಣೇಶ್ ಭಟ್ ಅವರು ಶ್ರೀ ಕ್ಷೇತ್ರದಲ್ಲಿ ಬಿಡುಗಡೆ ಮಾಡಿ ಚಿತ್ರಕ್ಕೆ ಶುಭಾಶೀರ್ವಾದ ನೀಡಿದರು.
ಈ ಚಿತ್ರವು ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದಲ್ಲಿ ಮೂಡಿಬಂದಿದೆ.
“ಪಿಲಿಪಂಜ” ಚಲನಚಿತ್ರವು ಎರಡು ಹಂತದ ಚಿತ್ರೀಕರಣವನ್ನು ಈಗಾಗಲೇ ಮುಗಿಸಿದೆ. ಇನ್ನು ಹಾಡಿನ ಚಿತ್ರೀಕರಣವಷ್ಟೇ ಬಾಕಿಯಿದ್ದು ಫ್ರೆಬ್ರವರಿ ಮೊದಲ ವಾರದಲ್ಲಿ ಹಾಡಿನ ಚಿತ್ರೀಕರಣವನ್ನು ಮುಗಿಸಿ ಶೀಘ್ರದಲ್ಲಿ ಚಲನಚಿತ್ರವನ್ನು ಬಿಡುಗಡೆ ಮಾಡುವ ತಯಾರಿಯಲ್ಲಿ ಚಿತ್ರತಂಡವಿದೆ.
ಚಿತ್ರದಲ್ಲಿ ರಮೇಶ್ ರೈ ಕುಕ್ಕುವಳ್ಳಿ, ಭೋಜರಾಜ್ ವಾಮಂಜೂರು, ಸುಂದರ್ ರೈ ಮಂದಾರ, ರವಿ ರಾಮಕುಂಜ, ಶಿವಪ್ರಕಾಶ್ ಪೂಂಜ, ಪ್ರತೀಕ್ ಯು ಪೂಜಾರಿ, ಪ್ರವೀಣ್ ಕೊಡಕ್ಕಲ್, ರಂಜನ್ ಬೋಳೂರು, ರಕ್ಷಣ್ ಮಾಡೂರು, ಪ್ರಕಾಶ್ ಶೆಟ್ಟಿ ಧರ್ಮನಗರ, ವಿಜಯಹರಿ ರೈ, ದಯಾನಂದ ಬೆಟ್ಟಂಪಾಡಿ, ರೂಪಶ್ರೀ ವರ್ಕಾಡಿ, ಜಯಶೀಲ, ರಾಧಿಕಾ, ಭಾಸ್ಕರ್ ಮಣಿಪಾಲ, ಹಾಗೂ ನಾಯಕಿಯಾಗಿ ದಿಶಾರಾಣಿ ಮುಂತಾದವರು ಬಣ್ಣ ಹಚ್ಚಿದ್ದಾರೆ.
ನಿರ್ಮಾಣ ಪ್ರತೀಕ್ ಯು ಪೂಜಾರಿ, ಕಥೆ- ನಿರ್ದೇಶನ ಭರತ್ ಶೆಟ್ಟಿ, ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ರಮೇಶ್ ರೈ ಕುಕ್ಕುವಳ್ಳಿ, ಛಾಯಾಗ್ರಹಣ ಉದಯ ಬಳ್ಳಾಲ್, ಸಂಗೀತ ಲಾಯ್ ವೆಲೆಂಟೀನ್ ಸಲ್ದಾನ, ಸಂಕಲನ ಶ್ರೀನಾಥ್ ಪವಾರ್, ಸಹನಿರ್ದೇಶನ ಅಕ್ಷತ್ ವಿಟ್ಲ, ಸಹಾಯಕ ನಿರ್ದೇಶನ ಸಜೇಶ್ ಪೂಜಾರಿ, ಚಿತ್ರಕಥೆ ಸಂಭಾಷಣೆ ಸುರೇಶ್ ಬಲ್ಮಠ ಅವರು ಇದ್ದಾರೆ ಎನ್ನಲಾಗಿದೆ.