Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಎರಡು ಸ್ಕೂಟರ್ ಗಳ ನಡುವೆ ಭೀಕರ ಅಪಘಾತ; ಸ್ಕೂಟರ್ ಸಹ ಸವಾರ ಸಾವು

ಮಂಗಳೂರು; ಎರಡು ಸ್ಕೂಟರ್ ಗಳ ನಡುವೆ ಭೀಕರ ಅಪಘಾತ; ಸ್ಕೂಟರ್ ಸಹ ಸವಾರ ಸಾವು

- Advertisement -
- Advertisement -

ಮಂಗಳೂರು; ಎರಡು ಸ್ಕೂಟರ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸಹ ಸವಾರ ಸಾವನ್ನಪ್ಪಿರುವ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ.ಉಳ್ಳಾಲ ಕೋಟೆಪುರದ ಕೋಡಿ ನಿವಾಸಿ ಅಹಮ್ಮದ್ ನಿಷಾದ್ (22) ಮೃತ ಯುವಕ

ನಿನ್ನೆ ಮುಂಜಾನೆ ನಾಲ್ಕು ಗಂಟೆಯ ವೇಳೆ ಸಯ್ಯದ್ ಹಫೀಝ್ ಎಂಬವರೊಂದಿಗೆ ಸ್ಕೂಟರ್‌ ನಲ್ಲಿ ಸಹ‌ ಸವಾರನಾಗಿ ಮಂಗಳೂರಿನಿಂದ ತೊಕ್ಕೊಟ್ಟಿಗೆ ಬರುತ್ತಿದ್ದ ವೇಳೆ ಕಲ್ಲಾಪು ಜಂಕ್ಷನ್ ನಲ್ಲಿ ತೊಕ್ಕೊಟ್ಟಿನಿಂದ‌ ಬಂದು ಗ್ಲೋಬಲ್ ಮಾರ್ಕೆಟ್ ಗೆ ಕ್ರಾಸ್ ಆಗುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿದೆ.

ಅಪಘಾತಕ್ಕೆ ಎರಡೂ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಂಭೀರ ಗಾಯಗೊಂಡ ನಿಷಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.‌ ಸ್ಕೂಟರ್ ಸವಾರ ಹಫೀಝ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮತ್ತೋರ್ವ ಸ್ಕೂಟರ್ ಸವಾರ ಕುತ್ತಾರು ಪದವು ನಿವಾಸಿ ಅಬೂಬಕ್ಕರ್ ಸಿದ್ದೀಕ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

Latest News

error: Content is protected !!