Thursday, June 4, 2026
Homeಕರಾವಳಿಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ;  ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿ;  ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸಾವು

- Advertisement -
- Advertisement -

ಬಂಟ್ವಾಳ: ಬೈಕ್ ಗೆ ರಿಕ್ಷಾ ಡಿಕ್ಕಿಯಾದ ಪರಿಣಾಮ  ದ್ವಿಚಕ್ರ ವಾಹನದಲ್ಲಿದ್ದ ಸಹ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನರಿಕೊಂಬು ಎಂಬಲ್ಲಿ ನಡೆದಿದೆ.ನರಿಕೊಂಬು ನಿವಾಸಿ ನೀಲಪ್ಪ ಪೂಜಾರಿ ಅವರ ಮಗ ಪವನ್ ( 17) ಮೃತಪಟ್ಟ ಬಾಲಕ.

 ಮನೆಯಿಂದ ಬಿಸಿರೋಡು ಕಡೆಗೆ ಸ್ಕೂಟರ್ ನಲ್ಲಿ ಸಹಸವಾರನಾಗಿ ಸಂಚಾರ ಮಾಡುತ್ತಿದ್ದ ವೇಳೆ ನರಿಕೊಂಬು ದಿಂಡಿಗೆ ಎಂಬಲ್ಲಿ ರಿಕ್ಷಾ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ರಿಕ್ಷಾ ಚಾಲಕ ಸಜೀಪ ನಿವಾಸಿ ಜಾಬೀರ್ ಕೂಡ ಗಾಯಗೊಂಡಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪವನ್ ಬಿ.ಮೂಡ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದಲ್ಲಿ ವ್ಯಾಸಂಗ ‌ಮಾಡುತ್ತಿದ್ದು, ಅತ್ಯಂತ ಪ್ರತಿಭಾವಂತ ವಿದ್ಯಾರ್ಥಿಯಾಗಿ ಗುರುತಿಸಿಕೊಂಡಿದ್ದ. ರಜಾ ದಿನಗಳಲ್ಲಿ ಅಜ್ಜನ ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದ. ಘಟನಾ ಸ್ಥಳಕ್ಕೆ ಬಂಟ್ವಾಳ ಸಂಚಾರ ಠಾಣಾ ಪಿಎಸ್‌ಐ ಸುತೇಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!