Wednesday, June 24, 2026
HomeWorldಉತ್ತರ ಪ್ರದೇಶದಂತೆ ಮುಸ್ಲಿಮರ ಮನೆಯನ್ನ ಬುಲ್ಡೋಜರ್‌ ಬಳಸಿ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ...

ಉತ್ತರ ಪ್ರದೇಶದಂತೆ ಮುಸ್ಲಿಮರ ಮನೆಯನ್ನ ಬುಲ್ಡೋಜರ್‌ ಬಳಸಿ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

- Advertisement -
- Advertisement -

ಕರ್ನಾಟಕದಲ್ಲಿ ಮುಸ್ಲಿಮರ ಮನೆಗಳನ್ನು ಬುಲ್ಡೋಜರ್‌ ಬಳಸಿ ಧ್ವಂಸ ಮಾಡಲಾಗಿದ್ದು, ಉತ್ತರ ಭಾರತದಲ್ಲಿ ಸಂಘ ಪರಿವಾರ ಅನುಸರಿಸುತ್ತಿರುವ ಅಲ್ಪಸಂಖ್ಯಾತ ವಿರೋಧಿ ಆಕ್ರಮಣಕಾರಿ ರಾಜಕೀಯದ ಮತ್ತೊಂದು ಆವೃತ್ತಿಯನ್ನು ಕರ್ನಾಟಕದಲ್ಲಿಯೂ ಕಾಣಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಬೆಂಗಳೂರಿನ ಯಲಹಂಕ ಕೋಗಿಲು ಲೇಔಟ್‌ ಬಳಿ ಸರ್ಕಾರದ ಜಾಗದಲ್ಲಿ ಅಕ್ರಮವಾಗಿ ನಿರ್ಮಿಸಿದ್ದ ಮನೆಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನೆಲಸಮ ಮಾಡಿದ್ದು ಅತ್ಯಂತ ಆಘಾತಕಾರಿ ಮತ್ತು ನೋವಿನ ಸಂಗತಿ. ಕೊರೆಯುವ ಚಳಿ ಇರುವಾಗಲೇ ಇವರನ್ನು ಹೊರದಬ್ಬಲಾಗಿದೆ. ಉತ್ತರ ಭಾರತದಲ್ಲಿ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ರಾಜಕೀಯ ದಾಳಿ ಈಗ ದಕ್ಷಿಣಕ್ಕೂ ಬಂದಿದೆ. ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರ ಯಾವ ರೀತಿ ಸಮರ್ಥಿಸಿಕೊಳ್ಳುತ್ತದೆ ಎಂದು ಪ್ರಶ್ನೆ ಮಾಡಿದ್ದಾರೆ.

- Advertisement -

Latest News

error: Content is protected !!