Tuesday, May 21, 2024
Homeಕರಾವಳಿಮಂಗಳೂರಿನಲ್ಲಿ ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

ಮಂಗಳೂರಿನಲ್ಲಿ ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ: ಶಾಸಕ ವೇದವ್ಯಾಸ್ ಕಾಮತ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ನಗರದಲ್ಲಿ ಜೀರ್ಣಾವಸ್ಥೆಯಲ್ಲಿದ್ದ ಅನೇಕ ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಇನ್ನಷ್ಟು ಕೆರೆಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಅವರು ಹೇಳಿದ್ದಾರೆ.


ಮಂಗಳೂರು ಮಹಾನಗರ ಪಾಲಿಕೆಯ ಸೆಂಟ್ರಲ್ ವಾರ್ಡಿನ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನದ ಕೆರೆಯ ನವೀಕರಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಕಾಮತ್, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಬಜಿಲಕೇರಿ ಶ್ರೀ ಮುಖ್ಯಪ್ರಾಣ ದೇವಸ್ಥಾನಕ್ಕೆ ಸಂಬಂಧಪಟ್ಟ ಕೆರೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ.


ಧಾರ್ಮಿಕತೆಯ ಭಾಗವಾಗಿರುವ ಪುರಾತನ ಕೆರೆಗಳನ್ನು ಅಭಿವೃದ್ಧಿಪಡಿಸಿ ಸಂರಕ್ಷಿಸುವ ಹೊಣೆಗಾರಿಕೆ ನಮ್ಮಮೇಲಿದೆ ಎಂದು ಹೇಳಿದರು.ಮಂಗಳೂರು ನಗರದಲ್ಲಿ ಅನೇಕ ಕೆರೆಗಳು ದಾಖಲೆಯಲ್ಲಿ ಮಾತ್ರವೇ ಉಳಿದಿದೆ. ಅಂತಹ ಅನೇಕ ಕೆರೆಗಳನ್ನು ಗುರುತಿಸಿದ್ದು ಹಂತ ಹಂತವಾಗಿ ಕೆರೆಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೆರೆಗಳ ಸಂರಕ್ಷಣೆಯಲ್ಲಿ ಸ್ಥಳೀಯರು ಕೂಡ ನಮ್ಮೊಂದಿಗೆ ಕೈ ಜೋಡಿಸಿ ಪ್ರಾಕೃತಿಕ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಲು ಸಹಕರಿಸಬೇಕು ಎಂದು ಹೇಳಿದ್ದಾರೆ.


ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ಮಾತನಾಡಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆರೆ ಹಾಗೂ ಪಾರ್ಕ್‌ ಅಭಿವೃದ್ಧಿಗೆ ಪ್ರತ್ಯೇಕ ಯೋಜನೆ ರೂಪಿಸಲಾಗಿದೆ. ಶಾಸಕರ ಸಹಕಾರದೊಂದಿಗೆ ಈಗಾಗಲೇ ವಿವಿಧ ಕೆರೆಗಳ ಅಭಿವೃದ್ಧಿ ಪ್ರಗತಿ ಸಾಧಿಸುತ್ತಿದೆ. ನಗರದ ಪಾರ್ಕ್ ಗಳ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.


ಈ ಕಾರ್ಯಕ್ರಮದಲ್ಲಿ ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಡಾ.ಭಾಸ್ಕರ್, ಶ್ರೀ ಮುಖ್ಯಪ್ರಾಣ ದೇವಸ್ಥಾನದ ಮುಖ್ಯ ಅರ್ಚಕರಾದ ಗುರುರಾಜ್ ಭಟ್, ಪ್ರಮುಖರಾದ ಮುರಳೀಧರ ನಾಯಕ್, ರಮೇಶ್ ಹೆಗ್ಡೆ, ಪೂರ್ಣಿಮ ರಾವ್, ಚಂದ್ರಕಾಂತ್ ನಾಯಕ್, ವಿಕ್ರಂ ರಾವ್, ಗಣೇಶ್ ನಾಯಕ್, ಕೇದರ್, ಗಿರೀಶ್ ಕುಮಾರ್, ಸೌಮ್ಯರೈ, ಪಿ.ಸಿ ಗುರು, ಪ್ರಮೋದ್ ಆಚಾರ್ಯ, ಹರಿಪ್ರಸಾದ್, ಅಮರ್, ವಸಂತ ಜೆ ಪೂಜಾರಿ, ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!