Friday, May 3, 2024
Homeತಾಜಾ ಸುದ್ದಿರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾಗಳ ಮಾರಾಟಕ್ಕೆ ಬ್ರೇಕ್ ಬೀಳುತ್ತಾ? ಇನ್ನೊಂದು ವಾರದಲ್ಲಿ ಸರ್ಕಾರದಿಂದ ಸುಗ್ರಿವಾಜ್ಞೆ ಸಾಧ್ಯತೆ...

ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾಗಳ ಮಾರಾಟಕ್ಕೆ ಬ್ರೇಕ್ ಬೀಳುತ್ತಾ? ಇನ್ನೊಂದು ವಾರದಲ್ಲಿ ಸರ್ಕಾರದಿಂದ ಸುಗ್ರಿವಾಜ್ಞೆ ಸಾಧ್ಯತೆ…

spot_img
- Advertisement -
- Advertisement -

ಬೆಂಗಳೂರು :   ಗುಟ್ಕಾ, ಪಾನ್ ಮಸಾಲಾಗಳಿಗೆ ಕೆಲವು ಜನ ಎಷ್ಟು ಅಡಿಕ್ಟ್ ಆಗಿದ್ದಾರೆ ಅಂದ್ರೆ ಎಷ್ಟೋ ಜನರ ದಿನ ಆರಂಭವಾಗೋದು ಹಾಗೇ ಅಂತ್ಯವಾಗೋದು ಇಂತಹ ಗುಟ್ಕಾ, ಪಾನ್ ಮಸಾಲಾಗಳಿಂದಲೇ. ಒಂದು ದಿನ ಅವುಗಳನ್ನು ತಿಂದಿಲ್ಲ ಅಂದ್ರೆ ಕೆಲವರಿಗೆ ಬದುಕೋಕೆ ಸಾಧ್ಯಾನೇ ಇಲ್ಲ ಅನ್ನುವಷ್ಟರಮಟ್ಟಿಗೆ ಕೆಲವರು ಅದಕ್ಕೆ ಒಗ್ಗಿ ಹೋಗಿರುತ್ತಾರೆ. ಅಂತಹವರಿಗೆ ರಾಜ್ಯ ಸರ್ಕಾರ ಶಾಕಿಂಗ್ ಸುದ್ದಿಯೊಂದನ್ನು ನೀಡಿದೆ.

ಹೌದು… ಗಾಂಜಾ ವಿರುದ್ಧ ಸಮರ ಸಾರಿರುವ ಸರ್ಕಾರ ಅದರ ಜೊತೆ ತಂಬಾಕು, ಗುಟ್ಕಾವನ್ನ ಸಹ ಕಂಪ್ಲೀಟ್ ಆಗಿ ಬ್ಯಾನ್ ಮಾಡಲು ಸರ್ಕಾರ ಪಣತೊಟ್ಟಿದೆ. ಈ ಸಂಬಂಧ ಸುಗ್ರಿವಾಜ್ಞೆ ಹೊರಡಿಸಲು ಮುಂದಾಗಿದೆ. ಇವು ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬ ನಿಟ್ಟಿನಲ್ಲಿ ಹಲವಾರು ರಾಜ್ಯಗಳು ಇವನ್ನು ನಿಷೇಧಿಸಿವೆ. ಇದೀಗ ಡ್ರಗ್ಸ್ ಜೊತೆಗೆ ಗುಟ್ಕಾ, ತಂಬಾಕವಿನ ಮಾರಾಟವನ್ನು ಬ್ಯಾನ್ ಮಾಡೋಕೆ ಸುಗ್ರೀವಾಜ್ಞೆ ಹೊರಡಿಸಲು ಸಿದ್ಧವಾಗಿದೆ.

ಜುಲೈ 31 ರಂದು ತಂಬಾಕು, ಗುಟ್ಕಾ ಹಾಗೂ ತಂಬಾಕು ಮಿಶ್ರಿತ ಉತ್ಪನ್ನಗಳ ಮಾರಾಟ ನಿಷೇಧದ ಬಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಸರ್ಕಾರದ ಗಮನ ಸೆಳೆದಿದ್ದರು. ಸಿಎಂ‌ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರನ್ನು ರಾಜಭವನಕ್ಕೆ ಕರೆಸಿಕೊಂಡು ಚರ್ಚಿಸಿದ್ದರು. ರಾಜ್ಯದಲ್ಲಿ ಡ್ರಗ್ಸ್ ಮತ್ತು ತಂಬಾಕು ನಿಷೇಧಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ್ದರು. ಆಗ ಸಿಎಂ ಬಿಎಸ್‌ವೈ ಅಗತ್ಯ ಬಿದ್ದಲ್ಲಿ ಸುಗ್ರೀವಾಜ್ಞೆ ಹೊರಡಿಸುವುದಾಗಿ ರಾಜ್ಯಪಾಲರಿಗೆ ಭರವಸೆ ನೀಡಿದ್ದರು. ಅದರಂತೆ ಇದೀಗ ರಾಜ್ಯದಲ್ಲಿ ಗುಟ್ಕಾ, ತಂಬಾಕು, ಡ್ರಗ್ಸ್ ಮಾರಾಟ ನಿಷೇಧಿಸಲು ಸರ್ಕಾರ ಸಿದ್ಧವಾಗಿದೆ.


ತಂಬಾಕು, ಗುಟ್ಕಾ ನಿಷೇಧದ ಬಗ್ಗೆ ರಾಜ್ಯ ಸರ್ಕಾರದಿಂದ ರಾಜ್ಯಪಾಲರಿಗೆ ಮಾಹಿತಿ ಕೂಡಾ ಸಲ್ಲಿಸಲಾಗಿದೆ. ಈ ಸಂಬಂಧವಾಗಿ ಮುಖ್ಯಮಂತ್ರಿಗಳ ಎಸಿಎಸ್ ಡಾ.‌ಇ.ವಿ.ರಮಣ ರೆಡ್ಡಿ ಹಾಗೂ ಆರೋಗ್ಯ ಇಲಾಖೆ ಎಸಿಎಸ್ ಜಾವೇದ್ ಅಖ್ತರ್ ರಾಜಭವನದಲ್ಲಿ ರಾಜ್ಯಪಾಲ ವಜುಭಾಯಿ ವಾಲಾರನ್ನು ಭೇಟ ಮಾಡಿ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!