Saturday, May 18, 2024
Homeತಾಜಾ ಸುದ್ದಿರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆರ್ಭಟ, ಮತ್ತೆ ಲಾಕ್ ಡೌನ್ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆರ್ಭಟ, ಮತ್ತೆ ಲಾಕ್ ಡೌನ್ ಸಾಧ್ಯತೆ

spot_img
- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕಂತೂ ಕೊರೊನಾ ಆರ್ಭಟ ಕಮ್ಮಿಯಾಗುವ ಯಾವ ಲಕ್ಷಣಗಳು ಕೂಡ ಕಾಣಿಸುತ್ತಿಲ್ಲ. ದಿನೇ ದಿನೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಲೇ ಇದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋದಕ್ಕೆ ಚಿಂತನೆ ನಡೆಸಲಾಗುತ್ತಿದೆ.

ಕೊರೊನಾ ಆರ್ಭಟ ಕಮ್ಮಿಯಾಗದೇ ಇರೋದರಿಂದ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರೇ ಮೈಕ್ರೋ ಲಾಕ್ ಡೌನ್ ಬಗ್ಗೆ ಸಲಹೆಯನ್ನು ಕೊಟ್ಟಿದ್ದಾರೆ. ಹಾಗಾಗಿ ಇದನ್ನು ರಾಜ್ಯ ಸರ್ಕಾರ ಪಾಲಿಸೋ ನಿಟ್ಟಿನಲ್ಲಿ ತಜ್ಞರ ಜೊತೆ ಚರ್ಚಿಸೋದಕ್ಕೆ ಮುಂದಾಗಿದೆ. ಅದರಲ್ಲೂ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಂತೂ ಕೊರೊನಾ ಅಬ್ಬರ ಮಿತಿ ಮೀರುತ್ತಿದೆ. ಧಾರವಾಡ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹಾಸನ, ಕಲಬುರಗಿ, ಉಡುಪಿ, ಶಿವಮೊಗ್ಗ ಬೆಂಗಳೂರು, ಮೈಸೂರು, ದಕ್ಷಿಣಕನ್ನಡ ಈ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೇ ದುಪ್ಪಟ್ಟಾಗುತ್ತಿದೆ. ಹೀಗಾಗಿ ಇದಕ್ಕೆಲ್ಲಾ ಬ್ರೇಕ್ ಹಾಕೋದಕ್ಕೆ ಲಾಕ್ ಡೌನ್ ಒಂದೇ ಪರಿಹಾರ ಅಂತಾ ಯೋಚಿಸಿರುವ ಸರ್ಕಾರ ಈ ನಿಟ್ಟಿನಲ್ಲಿ ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಿದೆ.

- Advertisement -
spot_img

Latest News

error: Content is protected !!