Sunday, May 5, 2024
Homeತಾಜಾ ಸುದ್ದಿನೀಟ್ ತರಬೇತಿ ಕೇಂದ್ರಗಳನ್ನು ತಾಲೂಕು ಕೇಂದ್ರಗಳಲ್ಲಿ ತೆರೆಯಲು ಚಿಂತನೆ ನಡೆಸಲಾಗಿದೆ: ಡಾ. ಕೆ. ಸುಧಾಕರ್

ನೀಟ್ ತರಬೇತಿ ಕೇಂದ್ರಗಳನ್ನು ತಾಲೂಕು ಕೇಂದ್ರಗಳಲ್ಲಿ ತೆರೆಯಲು ಚಿಂತನೆ ನಡೆಸಲಾಗಿದೆ: ಡಾ. ಕೆ. ಸುಧಾಕರ್

spot_img
- Advertisement -
- Advertisement -

ಬೆಂಗಳೂರು: ಬಡ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರದ ವತಿಯಿಂದ ನೀಟ್ ತರಬೇತಿ ಕೇಂದ್ರಗಳನ್ನು ತಾಲೂಕು ಕೇಂದ್ರಗಳಲ್ಲಿ ತೆರೆಯಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕ ಯು. ಟಿ. ಖಾದರ್ ಅವರ ಪ್ರಶ್ನೆಗೆ ಮಂಗಳವಾರ ಶೂನ್ಯ ವೇಳೆಯಲ್ಲಿ ಉತ್ತರಿಸಿದ ಅವರು, ನೀಟ್ ನ್ಯಾಶನಲ್ ಕೌನ್ಸಿಲ್ ಮೆಡಿಕಲ್ ಅಧೀನದಲ್ಲಿ ಬರುವುದರಿಂದ ನೀಟ್ ಸಂಬಂಧಿಸಿ ಸರಕಾರ ಯಾವುದೇ ಹೊಸ ನೀತಿ ಮಾಡುವುದಕ್ಕೆ ಸಾಧ್ಯವಾಗುವುದಿಲ್ಲ. ಈಗಿನ ನೀತಿಯ ಪ್ರಕಾರ ಶೇ.85ರಷ್ಟು ಸೀಟು ಗಳನ್ನು ರಾಜ್ಯದ ವಿದ್ಯಾರ್ಥಿಗಳಿಗೆ ಹಾಗೂ ಉಳಿದ ಶೇ. 15ರಷ್ಟು ಸೀಟುಗಳನ್ನು ಅಖಿಲ ಭಾರತ ಕೋಟಾದಡಿ ಹಂಚಿಕೆ ಮಾಡಲಾಗುತ್ತದೆ ಎಂದರು.

ಯುದ್ಧಗ್ರಸ್ಥ ಉಕ್ರೇನ್ ನಿಂದ ರಾಜ್ಯಕ್ಕೆ ಮರಳಿದ ವಿದ್ಯಾರ್ಥಿಗಳಿಗೆ ಇಲ್ಲಿಯೇ ಶಿಕ್ಷಣ ಮುಂದುವರಿಸಲು ಅವಕಾಶ ನೀಡಬೇಕೆಂಬ ಯು.ಟಿ. ಖಾದರ್ ಅವರ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿಯೇ ಶಿಕ್ಷಣ ನೀಡುವ ಸಾಧ್ಯತೆಗಳ ಬಗ್ಗೆ ಈಗಾಗಲೇ ಮುಖ್ಯಮಂತ್ರಿಯವರು ರಾಜೀವಗಾಂಧಿ ಆರೋಗ್ಯ ವಿವಿ ಮತ್ತು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿದ್ದಾರೆ ಎಂದವರು ತಿಳಿಸಿದರು.

- Advertisement -
spot_img

Latest News

error: Content is protected !!