Thursday, May 16, 2024
Homeಕರಾವಳಿಉಡುಪಿಇಂದಿನಿಂದ ಅಂಗನವಾಡಿ, ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ !!

ಇಂದಿನಿಂದ ಅಂಗನವಾಡಿ, ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಕಲರವ !!

spot_img
- Advertisement -
- Advertisement -

ಬೆಂಗಳೂರು: ಕೋವಿಡ್ -19 ಕಾರಣದಿಂದ ಸುಮಾರು ಒಂದೂವರೆ ವರ್ಷದಿಂದ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ಎಲ್ಲಾ ಅಂಗನವಾಡಿಗಳಲ್ಲಿ ಪುಟ್ಟ ಮಕ್ಕಳ ನಗುವಿನ ಕಲರವ ಇಂದು ಆರಂಭಗೊಳ್ಳಲಿದ್ದು, ಇದಕ್ಕಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ ಪೌಷ್ಟಿಕ ಆಹಾರವನ್ನು ಕೇಂದ್ರದಲ್ಲಿಯೇ ನೀಡಲಾಗುತ್ತದೆ.

ಎಲ್‌ಕೆಜಿ ಹಾಗೂ ಯುಕೆಜಿಯು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30ರಿಂದ ಅಪರಾಹ್ನ 3.30ರ ವರೆಗೆ ನಡೆಸಲು ಸೂಚನೆ ನೀಡಲಾಗಿದೆ. ತರಗತಿಗಳನ್ನು ಸಿಂಗರಿಸಲಾಗಿದ್ದು, ಪುಟಾಣಿಗಳ ಸ್ವಾಗತಕ್ಕೆ ಸಕಲ ತಯಾರಿ ಮಾಡಲಾಗಿದೆ.

ಇನ್ನು ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು ಹೀಗಿವೆ, ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು. ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸುವುದು. ಅಂಗವಾಡಿ ಕೇಂದ್ರಗಳಲ್ಲಿನ ಪಾಕೋಪಕರಣ, ಮಕ್ಕಳು ಕುಳಿತುಕೊಳ್ಳಲು ಉಪಯೋಗಿಸಿದ ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸುವುದು.

ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಚಗೊಳಿಸುವುದು. ಪೌಷ್ಟಿಕ ಆಹಾರ ತಯಾರಿಸುವ ಎಲ್ಲಾ ಪಾತ್ರೆ, ಲೋಟ, ಕುಕ್ಕರ್ ಶುಚಿಗೊಳಿಸುವುದು. ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡುವುದು. ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಚಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯು ಪಡೆಯುವುದು. ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.

ಕೋವಿಡ್ ಪಾಸಿಟಿವಿಟಿ ದರ 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸುವುದು. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು. ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಅನುಸರಿಸಬೇಕಾದ ಮಾರ್ಗಸೂಚಿ ಕ್ರಮಗಳು.

ರಾಜ್ಯದಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಶಾಲೆಗಳಲ್ಲಿನ ಹಾಗೂ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿನ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲು ಶಾಲೆಗಳ ಎಲ್ಲಾ ಶಿಕ್ಷಕರು, ವಿದ್ಯಾರ್ಥಿಗಳಿಗೆ ಅನ್ವಯಿಸುವಂತೆ, ಈ ಕೆಳಕಂಡ ಕ್ರಮವಹಿಸಲು ಸೂಚಿಸಿದೆ.

ದಿನಾಂಕ 08-11-2021ರಿಂದ ಅರ್ಧ ದಿನ ಎಲ್ಲಾ ಶಾಲೆಗಳಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವುದು. ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಸದರಿ ತರಗತಿಗಳನ್ನು ಭೌತಿಕವಾಗಿ ಪ್ರಾರಂಭಿಸುವುದು.
ಶಾಲೆ ಪ್ರಾರಂಭಕ್ಕೂ ಮುನ್ನಾ ಸೋಂಕು ನಿವಾರಕ ದ್ರಾವಣಗಳಿಂದ ಶುದ್ಧೀಕರಿಸುವುದು, ಸ್ಯಾನಿಟೈಸ್ ಮಾಡುವುದು.

ಶಾಲೆಗಳಲ್ಲಿ ಹಾಜರಾಗುವ ಎಲ್ ಕೆ ಜೆ ಮತ್ತು ಯುಕೆಜಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯವಾಗಿ ತರಬೇಕು. ಶಾಲೆಗೆ ಹಾಜರಾಗುವ ಎಲ್ಲಾ ಶಿಕ್ಷಕರು, ಇತರೆ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಎಚ್ಚರಿಕೆ ವಹಿಸುವುದು. ಶಿಕ್ಷಕರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಮಕ್ಕಳಿಗೆ ಮನೆಯಿಂದಲೇ ಉಪಹಾರ, ಕುಡಿಯುವ ಶುದ್ಧನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ಸೂಚಿಸುವುದು. ಶಾಲೆಗಳಲ್ಲಿ ಮಕ್ಕಳಿಗೆ ಕುಡಿಯಲು ಬಿಸಿನೀರು ವ್ಯವಸ್ಥೆ ಮಾಡುವುದು.

- Advertisement -
spot_img

Latest News

error: Content is protected !!