Wednesday, June 3, 2026
Homeತಾಜಾ ಸುದ್ದಿದಯವಿಟ್ಟು ಯಾವುದೇ ಆಡಂಬರ ಇಲ್ಲದೇ ನನ್ನ ಹುಟ್ಟುಹಬ್ಬ ಆಚರಿಸಿ; ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂದು ಅಭಿಮಾನಿಗಳಿಗೆ ನಟ...

ದಯವಿಟ್ಟು ಯಾವುದೇ ಆಡಂಬರ ಇಲ್ಲದೇ ನನ್ನ ಹುಟ್ಟುಹಬ್ಬ ಆಚರಿಸಿ; ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂದು ಅಭಿಮಾನಿಗಳಿಗೆ ನಟ ಯಶ್ ಮನವಿ

- Advertisement -
- Advertisement -

ಬೆಂಗಳೂರು; ದಯವಿಟ್ಟು ಯಾವುದೇ ಆಡಂಬರ ಇಲ್ಲದೇ ನನ್ನ ಹುಟ್ಟುಹಬ್ಬ ಆಚರಿಸಿ, ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂದು ಅಭಿಮಾನಿಗಳಿಗೆ ನಟ ಯಶ್ ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ.ನಿಮ್ಮ ಅಭಿಮಾನದ ಅಪ್ಪುಗೆ ಮತ್ತೊಂದು ವರ್ಷವನ್ನು ಸಾರ್ಥಕಗೊಳಿಸಿದೆ.

ಹೊಸ ವರ್ಷ ಹೊಸ ಭರವಸೆಗಳೊಂದಿಗೆ ನಗುನಗುತ್ತಾ ಬದುಕೋಣ. ಬದುಕನ್ನು ಮೆರಗುಗೊಳಿಸುವಂತಹ ಹೊಸ ಯೋಜನೆಗಳೊಂದಿಗೆ ಹೊಸ ವರ್ಷವನ್ನು ಸ್ವಾಗತಿಸೋಣ.

ಸಿನಿಮಾ ಕೆಲಸದ ನಿಮಿತ್ತ ನಾನು ಹುಟ್ಟುಹಬ್ಬದಂದು ಊರಿನಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕೆ ನೀವು ತೋರುವ ಅಭಿಮಾನ ಜವಾಬ್ದಾರಿಯುತವಾಗಿರಲಿ ಎಂಬುದು ನನ್ನ ಪ್ರೀತಿಯ ಮನವಿ. ಹಾಗಾಗಿ ಫೆಕ್ಸ್, ಬ್ಯಾನರ್ ಗಳ ಯಾವುದೇ ಆಡಂಬರ ಮಾಡದೆ ನನ್ನ ಮನಸ್ಸಿಗೆ ನೋವಾಗುವ ನಡವಳಿಕೆ ತೋರದೆ ನೀವು ಇದ್ದಲ್ಲಿಂದಲೇ ನಿಮ್ಮ ಕುಟುಂಬದವರು ಹೆಮ್ಮೆ ಪಡುವ ಕೆಲಸ ನಿಮ್ಮಿಂದ ಆದರೆ ಅದಕ್ಕಿಂತ ದೊಡ್ಡ ಜನ್ಮದಿನದ ಉಡುಗೊರೆ ನನಗೆ ಮತ್ತೊಂದು ಇಲ್ಲ. ಆದಷ್ಟು ಬೇಗ ನಿಮ್ಮನ್ನೆಲ್ಲಾ ಭೇಟಿ ಆಗುತ್ತೇನೆ. ಎಲ್ಲರಿಗೂ ಹೊಸ ವರ್ಷ ಒಳಿತನ್ನು ತರಲಿ. ನಿಮ್ಮ ಪ್ರೀತಿಯ ಯಶ್ ಎಂದು ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!