Thursday, January 16, 2025
Homeತಾಜಾ ಸುದ್ದಿಈ ಬಾರಿ ದಯವಿಟ್ಟು ನನ್ನ ಹುಟ್ಟುಹಬ್ಬ ಆಚರಿಸಬೇಡಿ; ಕಾರ್ಯಕರ್ತರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ...

ಈ ಬಾರಿ ದಯವಿಟ್ಟು ನನ್ನ ಹುಟ್ಟುಹಬ್ಬ ಆಚರಿಸಬೇಡಿ; ಕಾರ್ಯಕರ್ತರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮನವಿ

spot_img
- Advertisement -
- Advertisement -

ನವದೆಹಲಿ: ಈ ಬಾರಿ ದಯವಿಟ್ಟು ನನ್ನ ಹುಟ್ಟುಹಬ್ಬ ಆಚರಿಸಬೇಡಿ ಎಂದು ಕಾರ್ಯಕರ್ತರಿಗೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು ನನ್ನೆಲ್ಲಾ ನೆಚ್ಚಿನ ಕಾರ್ಯಕರ್ತ ಬಂಧುಗಳಲ್ಲಿ ನನ್ನ ಮನವಿ.ಡಿಸೆಂಬರ್ 16ರಂದು ನನ್ನ ಜನ್ಮದಿನ. ಪ್ರತೀ ವರ್ಷ ನೀವೆಲ್ಲ ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುತ್ತಾ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು. ಆ ಕೃತಜ್ಞತಾ ಭಾವದಿಂದ ನಿಮ್ಮಲ್ಲಿ ನನ್ನದೊಂದು ವಿನಮ್ರ ಕಳಕಳಿಯ ಮನವಿ.

ಸಂಸತ್ ಅಧಿವೇಶನ ನಡೆಯುತ್ತಿದೆ. ಹೀಗಾಗಿ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೆ; ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ಸಾಗಿದೆ. ಇಂಥಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ.

ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ತ್ವ. ಅದೇ ನನಗೆ ತಾವು ನನಗೆ ಕೊಡುವ ಉಡುಗೊರೆ ಎಂದಿದ್ದಾರೆ.

- Advertisement -
spot_img

Latest News

error: Content is protected !!