Saturday, May 18, 2024
Homeತಾಜಾ ಸುದ್ದಿನವದೆಹಲಿ: ದೇಶಾದ್ಯಂತ ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದು; ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ದೇಶಾದ್ಯಂತ ವಿವಾದಿತ ಮೂರು ಕೃಷಿ ಕಾಯ್ದೆಗಳು ರದ್ದು; ಪ್ರಧಾನಿ ಮೋದಿ ಘೋಷಣೆ

spot_img
- Advertisement -
- Advertisement -

ನವದೆಹಲಿ: ಕಳೆದ ಒಂದು ವರ್ಷದಿಂದ ವಿವಾದಕ್ಕೆ ಕಾರಣವಾಗಿದ್ದ ಹಾಗೂ ಬಾರೀ ಪ್ರತಿಭಟನೆಗೆ ಕಾರಣವಾಗಿದ್ದ ಮೂರು ಕೃಷಿ ಮಸೂದೆಯನ್ನು ಹಿಂತೆಗೆದುಕೊಳ್ಳುವುದಾಗಿ ಕೇಂದ್ರ ಸರಕಾರ ಘೋಷಿಸಿದೆ. ಇಂದು ನ.19 ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿದ ಭಾಷಣದಲ್ಲಿ 3 ಕಾಯ್ದಗಳನ್ನು ರದ್ದು ಮಾಡುವುದಾಗಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ.


ಗುರುನಾನಕ್ ಜಯಂತಿ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ರೈತರ ಆರ್ಥಿಕ ಸಾಮಾಜಿಕ ಸ್ಥಿತಿ ಸುಧಾರಿಸಲು ಪ್ರಯತ್ನ ಮಾಡುತ್ತಿದ್ದು, ಮೂರು ಕಾಯ್ದೆ ಜಾರಿಗೆ ತಂದಿದ್ದೆವು ಸಣ್ಣ ರೈತರ ಒಳಿತಿಗಾಗಿಯೇ ಕೃಷಿ ಕಾಯ್ದೆ ಜಾರಿಗೆ ತಂದಿದ್ದೇವೆ, ಕಾನೂನುಗಳು ಸಂಪೂರ್ಣವಾಗಿ ರೈತರ ಪರವಾಗಿದ್ದು ಇದನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಕಾಯ್ದೆ ಜಾರಿ ಮಾಡಲಾಗಿತ್ತು, ಯೋಜನೆ ಬಗ್ಗೆ ರೈತರಿಗೆ ತಿಳಿಸುವಲ್ಲಿ ಸಾಕಷ್ಟು ಯತ್ನಿಸಿದ್ದೇವೆ ಆದರೆ ಕೆಲವರು ಕಾಯ್ದೆಯನ್ನು ಅವರ ಸಲಹೆ ಒಪ್ಪಿಕೊಂಡಿದ್ದರೂ ವಿರೋಧಿಸುತ್ತಿದ್ದಾರೆ ನಿರಂತರ ಹೋರಾಟದಲ್ಲಿ ಹಿನ್ನೆಲೆಯಲ್ಲಿ ಇದೀಗ ಸರಕಾರ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಘೋಷಿಸಿದ್ದಾರೆ.


ಭಾಷಣದಲ್ಲಿ ಮೊದಲು ರೈತರ ಸಮಸ್ಯೆ ಕುರಿತು ಮಾತನಾಡಿದ ಪ್ರಧಾನಿ ರೈತರ ಸಮಸ್ಯೆ ಬಗೆಹರಿಸುವುದು ಸರಕಾರದ ಪ್ರಮುಖ ಆದ್ಯತೆಯಾಗಿದೆ. ದೇಶದಲ್ಲಿ ನೂರರಲ್ಲಿ ಎಂಬತ್ತು ಪರಿಷತ್ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ ಅದನ್ನು ಬಗೆಹರಿಸಲು ಪ್ರಯತ್ನ ಮಾಡುತ್ತಿದ್ದು, ಬೀಜ ವಿಮೆ ಮಾರುಕಟ್ಟೆ ಉಳಿತಾಯಕ್ಕೆ ಯೋಜನೆಗಳಿಗಾಗಿ ರೈತರಿಗೆ ಪಸಲ್ ಬಿಮಾ, ಪೆನ್ಷನ್ ಯೋಜನೆ ಜಾರಿಗೆ ತಂದಿದ್ದೇವೆ. ಕೃಷಿ ಮಾರುಕಟ್ಟೆ ಆಧುನಿಕರಣಕ್ಕೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು ಕೃಷಿ ಬಜೆಟ್ ಮೊದಲಿಗಿಂತ ಐದು ಪಟ್ಟು ಹೆಚ್ಚಿ ಸಿದ್ದೇವೆ. ರೈತರಿಗೆ 22 ಕೋಟಿ ಸಾಯಿಲ್ ಹೆಲ್ತ್ ಕಾರ್ಡ್ ನೀಡಿದ್ದೇವೆ ಎಂದು ಮೋದಿಯವರು ಹೇಳಿದ್ದಾರೆ.


ಸುಮಾರು ಒಂದು ವರ್ಷದಿಂದ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ದೆಹಲಿಯ ಗಡಿಭಾಗಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ ಒಂದೂವರೆ ವರ್ಷದ ಬಳಿಕ ಕತಾರ‍್ಪುರ್ ಕಾರಿಡಾರ್ ಅನ್ನು ಮತ್ತೆ ತೆರೆಯಲಾಗಿದೆ. 2ಹೆಕ್ಟೇರ್ ಗಿಂತ ಅಧಿಕ ಭೂಮಿ ಇಲ್ಲದ ಸಣ್ಣ ರೈತರ ಒಳಿತಿಗಾಗಿ ಸರಕಾರ ಶ್ರಮಿಸಿದೆ ಎಂದು ಹೇಳಿದರು.

- Advertisement -
spot_img

Latest News

error: Content is protected !!