Tuesday, May 7, 2024
Homeಕರಾವಳಿಉಡುಪಿರಾಜ್ಯದ 59.19 ಲಕ್ಷ ರೈತರ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಎರಡನೇ ಕಂತು ಜಮೆ

ರಾಜ್ಯದ 59.19 ಲಕ್ಷ ರೈತರ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಎರಡನೇ ಕಂತು ಜಮೆ

spot_img
- Advertisement -
- Advertisement -

ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 2ನೇ ಕಂತಿನಲ್ಲಿ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ. ಬಿಡುಗಡೆಯಾಗಿದೆ. ಪ್ರಸಕ್ತ ಸಾಲಿನ ಕಿಸಾನ್ ಸಮ್ಮಾನ್ ಎರಡನೇ ಕಂತಿನಲ್ಲಿ ಕರ್ನಾಟಕ ರಾಜ್ಯದ 51.19 ಲಕ್ಷ ರೈತರಿಗೆ 1023 ಕೋಟಿ ರೂ .ಗಳನ್ನು ಬಿಡುಗಡೆ ಮಾಡಲಾಗಿದ್ದು, ಎರಡನೇ ಕಂತಿನಲ್ಲಿ ಬಿಡುಗಡೆಯಾದ ಹಣವನ್ನು ರೈತರ ಖಾತೆಗಳಿಗೆ ಬಿಡುಗಡೆ ಮಾಡಲಾಗಿದೆ.

ಇಂದು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ರೈತರ ಖಾತೆಗಳಿಗೆ ಜಮಾ ಆಗುವಂತೆ ಹಣ ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಫೆ.1,2019 ರಿಂದ ಅನುಷ್ಠಾನಗೊಳಿಸಲಾಗುತ್ತಿದ್ದು, ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತ ಕುಟುಂಬಕ್ಕೆ ಕೇಂದ್ರ ಸರ್ಕಾರ ವಾರ್ಷಿಕವಾಗಿ 6 ಸಾವಿರ ರೂ.ಗಳ ಆರ್ಥಿಕ ನೆರವನ್ನು ನೀಡಲಾಗುತ್ತಿದೆ. ಈ ಅನುದಾನವನ್ನು 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ ನೀಡಲಾಗುತ್ತಿದೆ.


ಇಲ್ಲಿಯವರೆಗೆ 55.06 ಲಕ್ಷ ರೈತ ಕುಟುಂಬಗಳು 1 ಕಂತು ಪಡೆಯುವ ಮೂಲಕ ಯೋಜನೆಯ ಲಾಭವನ್ನು ಪಡೆದಿವೆ. 2019ರ ಮಾರ್ಚ್ ನಿಂದ ಜುಲೈ 2021 ರವರೆಗೆ ಕೇಂದ್ರ ಸರ್ಕಾರದಿಂದ ಒಟ್ಟು 6940.07 ಕೋಟಿ ರೂಪಾಯಿಗಳ ಆರ್ಥಿಕ ಸಹಾಯಧನವನ್ನು ಮೀಸಲಾಗಿರಿಸಲಾಗಿರುತ್ತದೆ. 2021 ಪ್ರಸಕ್ತ ವರ್ಷದ ಎರಡನೇ ಕಂತಿನಲ್ಲಿ 51.19 ಲಕ್ಷ ರೈತರಿಗೆ 1023 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಅನುಮೋದಿಸಲ್ಪಟ್ಟ ರೈತರಿಗೆ ಎರಡು ಕಂತುಗಳಲ್ಲಿ ವರ್ಷಕ್ಕೆ 4 ಸಾವಿರ ರೂಪಾಯಿನಂತೆ ಆರ್ಥಿಕ ನೆರವು ವರ್ಗಾವಣೆಗೆ ಆದೇಶ ಹೊರಡಿಸಲಾಗಿದ್ದು, ಇಲ್ಲಿಯವರೆಗೆ 2849.16 ಕೋಟಿ ರೂಪಾಯಿಗಳ ಆರ್ಥಿಕ ಸಹಾಯಧನವನ್ನು ನೀಡಲಾಗಿರುತ್ತದೆ.

ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಪಾವತಿ ಮಾಡಲಾಗುತ್ತಿದ್ದು, ದೇಶದಲ್ಲಿ ಎಲ್ಲಾ ರಾಜ್ಯಗಳ ಪೈಕಿ ಕರ್ನಾಟಕ ರಾಜ್ಯವು ಅತಿಹೆಚ್ಚು ಶೇಕಡಾವಾರು ಆಧಾರ್ ಆಧಾರಿತ ವಹಿವಾಟುಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ್ದರಿಂದ 2020-21 ರಲ್ಲಿ ಭಾರತ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ಪ್ರಶಸ್ತಿಯೂ ದೊರೆತಿದೆ.

- Advertisement -
spot_img

Latest News

error: Content is protected !!