Saturday, June 6, 2026
Homeತಾಜಾ ಸುದ್ದಿಇಂದು ಬೆಳಗ್ಗೆ 11ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

ಇಂದು ಬೆಳಗ್ಗೆ 11ಕ್ಕೆ ದೇಶವನ್ನುದ್ದೇಶಿಸಿ ಮಾತನಾಡಲಿರುವ ಪ್ರಧಾನಿ ನರೇಂದ್ರ ಮೋದಿ

- Advertisement -
- Advertisement -

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಇಂದಿನ ಮನ್ ಕೀ ಬಾತ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರ 1 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಸಾಧನೆಗಳು, ಮುಂದಿನ ಗುರಿಗಳ ಕುರಿತು ಪ್ರಸ್ತಾಪಿಸುವ ಸಾಧ್ಯತೆ ಇದೆ.

ಭಾರತದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು ಈಗಾಗಲೇ 1,74,170ರ ಗಡಿ ದಾಟಿದೆ. ದೇಶಾದ್ಯಂತ 4,981ಕ್ಕೂ ಅಧಿಕ ಮಂದಿ ಮಹಾಮಾರಿಗೆ ಬಲಿಯಾಗಿದ್ದು, 82,676 ಸೋಂಕಿತರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 86,502 ಮಂದಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇಂಥ ಪರಿಸ್ಥಿತಿಯಲ್ಲಿ ಪ್ರಜೆಗಳಿಗೆ ಪ್ರಧಾನಿಯ ಸಂದೇಶ ಏನಿರಬಹುದು ಎನ್ನುವುದು ಎಲ್ಲರ ಕುತೂಹಲವಾಗಿದೆ.

- Advertisement -

Latest News

error: Content is protected !!