Monday, May 20, 2024
Homeತಾಜಾ ಸುದ್ದಿ75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ:ದೇಶವನ್ನುದ್ದೇಶಿಸಿ ನರೇಂದ್ರ ಮೋದಿ ಭಾಷಣ

75 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ:ದೇಶವನ್ನುದ್ದೇಶಿಸಿ ನರೇಂದ್ರ ಮೋದಿ ಭಾಷಣ

spot_img
- Advertisement -
- Advertisement -

ನವದೆಹಲಿ : ದೇಶದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆಂಪುಕೋಟೆ ಮೇಲೆ ಸತತ 9 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದ್ರು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಕೆಂಪುಕೋಟೆ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಸತತ 9ನೇ ಬಾರಿಗೆ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ರಾಷ್ಟ್ರದ ಜನತೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ, ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನವಿದು. ಭಾರತ ಪ್ರಜಾಪ್ರಭುತ್ವದ ತಾಯಿ. ಭಾರತ ತನ್ನ 75 ವರ್ಷಗಳ ಪ್ರಯಾಣದಲ್ಲಿ ಅಮೂಲ್ಯವಾದ ಸಾಮರ್ಥ್ಯವನ್ನು ಹೊಂದಿದ್ದು, ಅನೇಕ ಸವಾಲುಗಳನ್ನು ಎದುರಿಸಿ ತನ್ನ ಸಾಮರ್ಥ್ಯ ಸಾಬೀತುಪಡಿಸಿದೆ ಎಂದು ಹೇಳಿದರು.

‘ಈ ಸ್ವಾತಂತ್ರ್ಯ ದಿನದಂದು ನಾನು ಎಲ್ಲಾ ಭಾರತೀಯರು ಮತ್ತು ಭಾರತವನ್ನು ಪ್ರೀತಿಸುವವರನ್ನು ಅಭಿನಂದಿಸುತ್ತೇನೆ. ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ದಿನ. ಈ ಕರ್ತವ್ಯದ ಹಾದಿಯಲ್ಲಿ ಜೀವ ನೀಡಿದ ಬಾಪು, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವೀರ ಸಾವರ್ಕರ್ ಅವರಿಗೆ ನಾಗರಿಕರು ಕೃತಜ್ಞತೆ ಸಲ್ಲಿಸುತ್ತೇನೆ. ಅಂತೆಯೇ ಮಂಗಲ್ ಪಾಂಡೆ, ತಾತ್ಯಾ ಟೋಪೆ, ಭಗತ್ ಸಿಂಗ್, ಸುಖದೇವ್, ರಾಜಗುರು, ಚಂದ್ರಶೇಖರ್ ಆಜಾದ್, ಅಶ್ಫಾಕುಲ್ಲಾ ಖಾನ್, ರಾಮ್ ಪ್ರಸಾದ್ ಬಿಸ್ಮಿಲ್ ಮತ್ತು ಬ್ರಿಟಿಷರ ಆಳ್ವಿಕೆಯ ಬುನಾದಿ ಬುಡಮೇಲು ಮಾಡಿದ ನಮ್ಮ ಅಸಂಖ್ಯಾತ ಕ್ರಾಂತಿಕಾರಿಗಳಿಗೆ ಈ ರಾಷ್ಟ್ರ ಕೃತಜ್ಞವಾಗಿದೆ ಎಂದರು.

- Advertisement -
spot_img

Latest News

error: Content is protected !!