Wednesday, June 3, 2026
Homeಕರಾವಳಿಉಡುಪಿಕೃಷ್ಣನೂರಿನಲ್ಲಿ ಮೋದಿ ಮೇನಿಯಾ:ಪ್ರಧಾನಿ ರೋಡ್ ಶೋನಲ್ಲಿ ಲಕ್ಷಾಂತರ ಮಂದಿ ಭಾಗಿ

ಕೃಷ್ಣನೂರಿನಲ್ಲಿ ಮೋದಿ ಮೇನಿಯಾ:ಪ್ರಧಾನಿ ರೋಡ್ ಶೋನಲ್ಲಿ ಲಕ್ಷಾಂತರ ಮಂದಿ ಭಾಗಿ

- Advertisement -
- Advertisement -

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಕೃಷ್ಣನೂರಿಗೆ ಆಗಮಿಸಿದ್ದು, ಮೋದಿಗೆ ಜನ ಭರ್ಜರಿ ಸ್ವಾಗತ ಕೋರಿದ್ದಾರೆ. ನಿಗದಿತ ಸಮಯಕ್ಕೆ ಮೊದಲೇ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸೇನಾ ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ಆಗಮಿಸಿದ್ದು ಉಡುಪಿಯ ಕರಾವಳಿ ಬೈಪಾಸ್ ನಿಂದ ಬನ್ನಂಜೆ ಮಾರ್ಗವಾಗಿ ಕಲ್ಸಂಕದವರೆಗೆ ನಡೆಯುತ್ತಿರುವ ರೋಡ್ ಶೋ ನಲ್ಲಿ ಭಾಗವಹಿಸಿದರು.

ಉಡುಪಿಯಿಂದ ಕೃಷ್ಣ ಮಠದವರೆಗೂ ನಡೆಯುತ್ತಿರುವ ರೋಡ್ ಶೋದಲ್ಲಿ ಪ್ರಧಾನಿ ಮೋದಿಯವರು ಅಭಿಮಾನಿಗಳತ್ತ ಕೈ ಬೀಸಿ ಸಾಗಿದ್ದಾರೆ. ರೋಡ್ ಶೋ ಆರಂಭವಾದಾಗಿನಿಂದಲೂ ರಸ್ತೆಯ ಇಕ್ಕೆಲಗಳಲ್ಲಿ ಸಾವಿರಾರು ಮಂದಿ ನಿಂತು ಜೈಘೋಷ ಹಾಕಿ, ಹೂಮಳೆ ಸುರಿಸಿ, ನೆಚ್ಚಿನ ನಾಯಕನನ್ನು ಹತ್ತರ್ದಿಂದ ನೋಡಿ ಕಣ್ತುಂಬಿಕೊಂಡರು.

ಬೆಳಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್​ , ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಹೆಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದರು.

ಈ ನಡುವೆ ಉಡುಪಿ ಭೇಟಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಮೋದಿಯವರು, ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಲಕ್ಷ ಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ದೊರೆತಿರುವುದು ನನಗೆ ಗೌರವದ ವಿಷಯ ಎಂದು ಹೇಳಿದ್ದಾರೆ.

ಗೀತಾ ಪಠಣಕ್ಕಾಗಿ ಸಮಾಜದ ವಿವಿಧ ವರ್ಗಗಳ ಜನರನ್ನು ಒಂದೆಡೆ ಸೇರಿಸುವ ವಿಶೇಷ ಕಾರ್ಯಕ್ರಮ ಇದಾಗಿದೆ. ಈ ಮಠವು ನಮ್ಮ ಸಾಂಸ್ಕೃತಿಕ ಜೀವನದಲ್ಲಿ ಅತ್ಯಂತ ವಿಶೇಷ ಮಹತ್ವವನ್ನು ಹೊಂದಿದೆ. ಶ್ರೀ ಮಧ್ವಾಚಾರ್ಯರಿಂದ ಪ್ರೇರಿತವಾದ ಈ ಮಠವು, ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!