Thursday, June 4, 2026
Homeತಾಜಾ ಸುದ್ದಿಸಂಜೆ 4.30ಕ್ಕೆ ಬಿಜೆಪಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಲಿರುವ ಪ್ರಧಾನಿ ಮೋದಿ

ಸಂಜೆ 4.30ಕ್ಕೆ ಬಿಜೆಪಿ ಕಾರ್ಯಕರ್ತರ ಜೊತೆ ಚರ್ಚೆ ಮಾಡಲಿರುವ ಪ್ರಧಾನಿ ಮೋದಿ

- Advertisement -
- Advertisement -

ದೆಹಲಿ: ‘ಸೇವಾ ಹಿ ಸಂಘಟನ್’ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಸಂಜೆ 4 ಗಂಟೆಗೆ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

”ಬಿಜೆಪಿ ಕಾರ್ಯಕರ್ತರಿಗೆ ದೇಶ ಮೊದಲು. ಇಂತಹ ಸವಾಲಿನ ಸಮಯದಲ್ಲಿ ನಮ್ಮ ಕಾರ್ಯಕರ್ತರು ಮತ್ತು ಕಾರ್ಮಿಕರು ದಣಿವರಿಯದೆ ಕೆಲಸ ಮಾಡುತ್ತಿದ್ದಾರೆ.ಅಗತ್ಯ ಇರುವವರಿಗೆ ಸಹಾಯ ಮಾಡುತ್ತಿದ್ದಾರೆ. ಇಂದಿನ ಸಂವಾದದ ವೇಳೆ ಮುಂದಿನ ದಾರಿಯ ಬಗ್ಗೆ ಚರ್ಚಿಸಲಿದ್ದೇನೆ” ಎಂದು ಮೋದಿ ಕರೆ ನೀಡಿದ್ದಾರೆ.

ಶುಕ್ರವಾರ ಪ್ರಧಾನಿ ಮೋದಿ ಲಡಾಖ್‌ಗೆ ಭೇಟಿ ನೀಡಿ ಯೋಧರ ಯೋಗಕ್ಷೇಮ ವಿಚಾರಿಸಿದ್ದರು. ಚೀನಾ ಜೊತೆ ಭಾರತ ಘರ್ಷಣೆ ಆದ ಬಳಿಕ ಮೊದಲ ಬಾರಿಗೆ ಲಡಾಖ್‌ಗೆ ಭೇಟಿ ನೀಡಿ ಉದ್ವಿಗ್ನತೆಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದರು.

- Advertisement -

Latest News

error: Content is protected !!