Thursday, June 4, 2026
Homeತಾಜಾ ಸುದ್ದಿಏ.21'ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ಏ.21’ರಂದು ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

- Advertisement -
- Advertisement -

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 21ರಂದು ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮದಿನಾಚರಣೆ ನಿಮಿತ್ತಕೆಂಪು ಕೋಟೆಯ ಮೇಲಿನಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸ್ಕೃತಿ ಸಚಿವಾಲಯ ಸೋಮವಾರ ತಿಳಿಸಿದೆ.


ಇನ್ನು ಇದಲ್ಲದೆ, ಪಿಎಂ ಮೋದಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆ ಚೀಟಿಯನ್ನ ಸಹ ಬಿಡುಗಡೆ ಮಾಡಲಿದ್ದಾರೆ.’ಪ್ರಧಾನಿ ನರೇಂದ್ರ ಮೋದಿ ಅವ್ರ ಏಪ್ರಿಲ್ 21ರಂದು ಕೆಂಪು ಕೋಟೆಯಲ್ಲಿ ಸಿಖ್ ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮದಿನಾಚರಣೆ ಪ್ರಯುಕ್ತ ಭಾಗವಹಿಸಲಿದ್ದಾರೆ.


ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಅಂಚೆ ಚೀಟಿ ಮತ್ತು ನಾಣ್ಯವನ್ನ ಬಿಡುಗಡೆ ಮಾಡಲಿದ್ದಾರೆ’ ಎಂದು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

- Advertisement -

Latest News

error: Content is protected !!