- Advertisement -
- Advertisement -
ನವದೆಹಲಿ: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಬೆಳಗ್ಗೆ 9 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ನಾಳೆ ಮಾಡಲಿರುವ ಭಾಷಣ ದೇಶದ ಜನರ ಗಮನ ಸೆಳೆದಿದೆ.ನಾಳೆ ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಂಚಿಕೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಪ್ರಧಾನಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕೋರೋನಾ ಸೋಂಕು ತಡೆಗೆ ಮಹತ್ವದ ನಿರ್ಧಾರ ಕೈಗೊಂಡಿದ್ದ ಅವರು ಮಾರ್ಚ್ 22ರಂದು ಜನತಾ ಕರ್ಫ್ಯೂ ಘೋಷಣೆ ಮತ್ತು ಮಾರ್ಚ್ 24ರಿಂದ ಲಾಕ್ ಡೌನ್ ಘೋಷಣೆ ಮಾಡುವ ನಿರ್ಧಾರವನ್ನು ಪ್ರಕಟಿಸಿದ್ದರು. ನಾಳೆ ಬೆಳಗ್ಗೆ ಕೂಡ ಕೊರೋನಾ ತಡೆಗೆ ಮಹತ್ವದ ನಿರ್ಧಾರದ ಘೋಷಣೆ ಮಾಡುವ ಸಾಧ್ಯತೆ ಇದೆ.
- Advertisement -