ದೇಶಾದ್ಯಂತ ಲಾಕ್ ಡೌನ್ ಮುಂದುವರೆಸಬೇಕೋ ಬೇಡವೋ ಎನ್ನುವ ಕುರಿತಂತೆ ಈಗಾಗಲೇ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಚರ್ಚೆ ನಡೆಸಿದ್ದಂತ ಪ್ರಧಾನಿ ನರೇಂದ್ರ ಮೋದಿ, ನಾಳೆ ಬೆಳಿಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ, ಲಾಕ್ ಡೌನ್ ಮುಂದುವರೆಸೋ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ.
ನಾಳೆ ದೇಶಾದ್ಯಂತ ಘೋಷಣೆ ಮಾಡಿದ್ದಂತ ಮೊದಲ ಹಂತದ ಲಾಕ್ ಡೌನ್ ಮುಕ್ತಾಯಗೊಳ್ಳಲಿದೆ. ಈ ಬಳಿಕ ಲಾಕ್ ಡೌನ್ ಅನ್ನು ಕೊರೊನಾ ವೈರಸ್ ಸೋಂಕು ನಿವಾರಿಸುವ ನಿಟ್ಟಿನಲ್ಲಿ ಮುಂದುವರೆಸೋದಾ ಅಥವಾ ಬಿಡೋದಾ ಎನ್ನುವ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ವೀಡಿಯೋ ಕಾನ್ಫೆರೆನ್ಸ್ ನಡೆಸಿ ಮಾಹಿತಿಯನ್ನು ಪಡೆದಿದ್ದರು.
ಈ ಬಳಿಕ ನಾಳೆ ಪ್ರಧಾನಿ ನರೇಂದ್ರ ಮೋದಿಯವರು, ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಮೂಲಕ ಏಪ್ರಿಲ್ 14ರ ನಂತ್ರ ಲಾಕ್ ಡೌನ್ ಅನ್ನು ಅಂತ್ಯಗೊಳಿಸದೇ ಏಪ್ರಿಲ್ 30ರ ವರೆಗೆ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಸಲಹೆ ನೀಡಿದ್ದರು. ಈ ಹಿನ್ನಲೆಯಲ್ಲಿ ನಾಳೆ ಬೆಳಿಗ್ಗೆ 10 ಗಂಟೆಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಲಿದ್ದು, ಏಪ್ರಿಲ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಕಾದು ನೋಡಬೇಕಿದೆ.