ನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ತಡೆಗಟ್ಟುವಿಕೆ, ಲಾಕ್ ಡೌನ್ ಗೆ ಸಂಬಂಧಪಟ್ಟಂತೆ ಸೋಮವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಮಾಲೋಚನಾ ಸಭೆ ನಡೆಸಿದರು.
ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಈಗಾಗಲೇ ಹಲವು ಬಾರಿ ದೇಶದ ಜನರಲ್ಲಿ ಮನವಿ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಸೋಮವಾರವೂ ಅದನ್ನೇ ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು ಎಂದಿದ್ದಾರೆ.
ಹಲವು ದಿನಗಳಿಂದ ಈಚೆಗೆ ಕರೊನಾ ವೈರಸ್ ಎಂಬುದು ನಮ್ಮ ಜೀವನದ ಒಂದು ಭಾಗವಾಗಿ ಹೋಗಿದೆ. ಅದು ನಮಗೆ ಒಡ್ಡುತ್ತಿರುವ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ರಾಜಿ ಆಗಬಾರದು ಎಂದು ಪ್ರಧಾನಿ ಎಚ್ಚರಿಸಿದರು . ಸೋಂಕು (ಕೋವಿಡ್ 19) ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಮೇ 3ರ ಬಳಿಕವೂ ಲಾಕ್‌ಡೌನ್ ಮುಂದುವರಿಸುವ ಬಗ್ಗೆ ಹೆಚ್ಚಿನ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಬಳಿ ಚರ್ಚೆ ನಡೆಸಿದ್ದಾರೆ.ಈ ವೇಳೆ, ಮೇ 16 ವರೆಗೆ ಲಾಕ್‌ಡೌನ್ ವಿಸ್ತರಣೆಗೆ ಅವಕಾಶ ನೀಡಬೇಕು ಎಂದು ಮೇಘಾಲಯ ಮತ್ತು ಮಿಜೋರಾಂ ಮುಖ್ಯಂತ್ರಿಗಳು ಮನವಿ ಮಾಡಿದ್ದಾರೆ. ಹಂತಹಂತವಾಗಿ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡುತ್ತೇವೆ ಎಂದು ಉತ್ತರಾಖಂಡ ಮುಖ್ಯಮಂತ್ರಿಯವರು ಪ್ರಧಾನಿಗೆ ತಮ್ಮ ಅಭಿಪ್ರಾಯ ತಿಳಿಸಿದರು .ಆದ್ಯತೆ ಮೇರೆಗೆ ಹಂತಹಂತವಾಗಿ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆಗಿನ ಸಭೆಯಲ್ಲಿ ಪ್ರಧಾನಿಯವರು ದೀರ್ಘ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯ ಸರ್ಕಾರಗಳ ಪಾತ್ರ ಮತ್ತು ಸಹಕಾರವನ್ನು ಪ್ರಧಾನಿ ಶ್ಲಾಘಿಸಿದರು .
ಇದೆ ವೇಳೆ ಮಾತನಾಡಿದ ಗ್ರಹ ಸಚಿವ ಅಮಿತ್ ಶಾಹ್ ಅವರು ಬೇರೆ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಕೊರೊನಾ ಕಡಿಮೆ ಇರುವುದು ನಿಜ. ಆದರೂ ಲಾಕ್‌ಡೌನ್ ನಿಯಮಗಳನ್ನು ಯಾರೂ ಉಲ್ಲಂಘಿಸಬಾರದು ಎಂದರು .
ಕೈಗಾರಿಕೆ, ಅಗತ್ಯವಸ್ತುಗಳ ವ್ಯಾಪಾರ ವಹಿವಾಟು ಮತ್ತು ಇತರ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಿದ್ದೇವೆ. ಕೊರೊನಾ ವಿರುದ್ಧ ನಡೆಯುತ್ತಿರುವುದು ಸುದೀರ್ಘ ಹೋರಾಟ. ಹಂತಹಂತವಾಗಿ ಲಾಕ್‌ಡೌನ್ ತೆರವು ಮಾಡಬೇಕಿದೆ ಎಂದೂ ಅಮಿತ್ ಶಾ ಹೇಳಿದರು.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷವರ್ಧನ್ ಮತ್ತು ಪ್ರಧಾನ ಮಂತ್ರಿ ಸಚಿವಾಲಯ ಹಾಗೂ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹ ವಿಡಿಯೊ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದಾರೆ. ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಕೆ.ಸುಧಾಕರ್, ಬಸವರಾಜ ಬೊಮ್ಮಯಿ ಸಾಥ್ ನೀಡಿದ್ದಾರೆ.
ಪ್ರಧಾನಿ ಮೋದಿ ವಿಡಿಯೋ ಸಂವಾದ : ಲಾಕ್ ಡೌನ್ ವಿಸ್ತರಣೆಗೆ ರಾಜ್ಯಗಳ ಒಲವು
- Advertisement -
- Advertisement -
- Advertisement -