- Advertisement -
- Advertisement -
ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ ರದ್ದು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ನಡೆಸಿತು. ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೆ.19ಕ್ಕೆ ಮುಂದೂಡಿದೆ.
ಈ ವೇಳೆ ಪ್ರಕರಣದಲ್ಲಿ ವಾದ ಮಂಡಿಸಲು ಹಿರಿಯ ವಕೀಲ ಪ್ರೊ.ರವಿವರ್ಮಕುಮಾರ್ ನೇಮಕವಾಗಿದೆ. ಹೀಗಾಗಿ ವಾದ ಮಂಡಿಸಲ ಕಾಲಾವಕಾಶ ನೀಡಲು ಎಸ್.ಪಿ.ಪಿ ಅಶೋಕ್ ನಾಯಕ್ ಮನವಿ ಮಾಡಿದರು. ಈ ಮನವಿ ಮಾನ್ಯ ಮಾಡಿದ ಹೈಕೋರ್ಟ್ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಿದೆ.ಅಲ್ಲದೆ, ಈ ಹಿಂದೆ ಯಡಿಯೂರಪ್ಪ ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶ ವಿಸ್ತರಿಸಿ ಹೈಕೋರ್ಟ್ ಆದೇಶಿಸಿದೆ.
- Advertisement -