Saturday, April 27, 2024
Homeತಾಜಾ ಸುದ್ದಿಬಿ.ಎಸ್.ವೈ ವಿರುದ್ಧ ಪೋಕ್ಸೋ ಪ್ರಕರಣ; ತನಿಖೆ ಸಿಐಡಿಗೆ ವರ್ಗಾವಣೆ

ಬಿ.ಎಸ್.ವೈ ವಿರುದ್ಧ ಪೋಕ್ಸೋ ಪ್ರಕರಣ; ತನಿಖೆ ಸಿಐಡಿಗೆ ವರ್ಗಾವಣೆ

spot_img
- Advertisement -
- Advertisement -

ಬಾಲಕಿಯ ಮೇಲೆ ದೈಹಿಕ ದೌರ್ಜನ್ಯವೆಸಗಿದ ಪ್ರಕರಣದಡಿಯಲ್ಲಿ ಬಿಜೆಪಿಯ ಹಿರಿಯ ನಾಯಕ ಬಿಎಸ್​ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಎಫ್​ಐಆರ್​​ಗೆ ಸಂಬಂಧಿಸಿ ತನಿಖೆಯ ಹೊಣೆಯನ್ನು ಸಿಐಡಿಗೆ ವರ್ಗಾಯಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ದೂರು ದಾಖಲಾಗಿತ್ತು. ಈ ಸಂಬಂಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆಯ ತಾಯಿ ನೀಡಿದ್ದ ದೂರಿನ ಅನ್ವಯ ಪೊಲೀಸರು ಎಫ್​ಐಆರ್ ದಾಖಲಿಸಿದ್ದರು.

ಇದೀಗ ಡಿಜಿ ಹಾಗೂ ಐಜಿಪಿ ಅಲೋಕ್ ಮೋಹನ್ ಯಡಿಯೂರಪ್ಪ ವಿರುದ್ಧದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವುದಾಗಿ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಇಂದು ಸಂಜೆ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆಯಿದೆ. ಇನ್ನು ಸಂತ್ರಸ್ತೆಯ ತಾಯಿ ಈ ಹಿಂದೆ 53 ಮಂದಿ ವಿರುದ್ಧ ದೂರು ನೀಡಿದ್ದರು. ಆ ಪೈಕಿ ಹಿರಿಯ ಪೊಲೀಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳೂ ಇದ್ದರು ಎನ್ನಲಾಗಿದೆ. ಈ ಮಧ್ಯೆ, ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥರು ಇರಬಹುದು ಎಂದು ಕೆಲವರು ಹೇಳುತ್ತಿದ್ದಾರೆ ಎಂದೂ ಗೃಹ ಸಚಿವರು ಹೇಳಿದ್ದಾರೆ.

- Advertisement -
spot_img

Latest News

error: Content is protected !!