Sunday, May 5, 2024
Homeತಾಜಾ ಸುದ್ದಿವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ: ಮುರುಘಾ ಮಠದ ಶ್ರೀಗಳ ವಿರುದ್ಧ ಪೋಕ್ಸೋ ಕೇಸ್

spot_img
- Advertisement -
- Advertisement -

ಮೈಸೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದೂರು ದಾಖಲಾಗಿದೆ. ಮಠದ ಮೂವರು ಹಾಗೂ ಮೈಸೂರಿನ ಇಬ್ಬರ ವಿರುದ್ಧ ಇಲ್ಲಿನ ನಜರಾಬಾದ್ ಠಾಣೆಯಲ್ಲಿ ‘ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ’ (ಪೋಕ್ಸ್) ಅಡಿ ದೂರು ದಾಖಲಾಗಿದೆ.

ಪ್ರಕರಣದಲ್ಲಿ ಶರಣರು ಮೊದಲ ಆರೋಪಿಯಾಗಿದ್ದು, ಚಿತ್ರದುರ್ಗದಲ್ಲಿ ಮಠ ನಡೆಸುತ್ತಿರುವ ಅಕ್ಕಮಹಾದೇವಿ ವಸತಿ ನಿಲಯದ ವಾರ್ಡನ್ ರಶ್ಮಿ ಎರಡನೇ ಆರೋಪಿ. ಮಠದ ಬಸವಾದಿತ್ಯ (ಮರಿಸ್ವಾಮಿ) ಮೂರನೇ ಆರೋಪಿ.

ಮಠದ ಭಕ್ತರೆನ್ನಲಾದ ಮೈಸೂರಿನ ಪರಮಶಿವಯ್ಯ ಮತ್ತು ವಕೀಲ ಗಂಗಾಧರಯ್ಯ ಕ್ರಮವಾಗಿ ನಾಲ್ಕು ಮತ್ತು ಐದನೇ ಆರೋಪಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಸಿ.ಚಂದ್ರಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!