Monday, July 13, 2026
Homeಅಪರಾಧಪೋಕ್ಸೊ ಪ್ರಕರಣ: ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು

ಪೋಕ್ಸೊ ಪ್ರಕರಣ: ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು

- Advertisement -
- Advertisement -

ಹಾಸ್ಟೆಲ್ ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ (POCSO) ಪ್ರಕರಣ ಎದುರಿಸುತ್ತಿದ್ದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ದಾವಣಗೆರೆಯ ಜಿಲ್ಲಾ ವಿಶೇಷ ಪೋಕ್ಸೊ ನ್ಯಾಯಾಲಯವು ಸೋಮವಾರ (ಜುಲೈ 13) ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಹಿಂದೆ ಜೂನ್ 25ರಂದು ಹೈಕೋರ್ಟ್ ಶ್ರೀಗಳ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಿ, ನಿಯಮಿತ (ರೆಗ್ಯುಲರ್) ಬೇಲ್ ಪಡೆಯುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಜೂನ್ 27ರಂದು ವಚನಾನಂದ ಶ್ರೀಗಳು ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಉಭಯ ಪಕ್ಷಗಳ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಶ್ರೀರಾಮ ನಾರಾಯಣ ಹೆಗಡೆ ಅವರು, ಸ್ವಾಮೀಜಿಗೆ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿ ಆದೇಶಿಸಿದ್ದಾರೆ.

- Advertisement -

Latest News

error: Content is protected !!