Saturday, December 14, 2024
HomeUncategorizedಫಲ್ಗುಣಿ ನದಿಗೆ ವಿಷ ಹಾಕಿದ ದುಷ್ಕರ್ಮಿಗಳು: ಸಾವಿರಾರು ಮೀನುಗಳ ಮಾರಣಹೋಮ

ಫಲ್ಗುಣಿ ನದಿಗೆ ವಿಷ ಹಾಕಿದ ದುಷ್ಕರ್ಮಿಗಳು: ಸಾವಿರಾರು ಮೀನುಗಳ ಮಾರಣಹೋಮ

spot_img
- Advertisement -
- Advertisement -

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಗ್ರಾಮ ನಡ್ತಿಕಲ್ಲಿನ ದಾಡೇಲು ಎಂಬಲ್ಲಿ ಪಲ್ಗುಣಿ ನದಿಗೆ ವಿಷ ಹಾಕಿದ ಪರಿಣಾಮ ಸಾವಿರಾರು ಮೀನುಗಳ ಮಾರಣ ಹೋಮ ನಡೆದಿದೆ.

ನದಿಯ ದಡದಲ್ಲಿ ರಾಶಿರಾಶಿ ಮೀನುಗಳು ಸತ್ತು ಬಿದ್ದಿದೆ. ಸತ್ತ ಮೀನಿನ ಕೆಟ್ಟ ವಾಸನೆಯಿಂದ ಆ ಪರಿಸರಕ್ಕೆ ಹೋಗದಂತಹ ಸ್ಥಿತಿ ನಿರ್ಮಾಣವಾಗಿದ್ದು .ರೋಗ ಹರಡುವ ಭೀತಿಯ ಎದುರಾಗಿದೆ.

ಪರಿಸರದ ಸುತ್ತಮುತ್ತಲಿನ ಜನ ಭಯಬೀತರಾಗಿದ್ದಾರೆ ಪ್ರಾಣಿ ಪಕ್ಷಿಗಳು ಈ ವಿಷ ನೀರನ್ನೆ ಕುಡಿಯುತ್ತಿದ್ದು ಅವುಗಳು ಕೂಡ ಸಾಯುವ ಸ್ಥಿತಿ ನಿರ್ಮಾಣವಾಗಿದೆ ಅದೇ ರೀತಿ ಕೆಲವು ಹಕ್ಕಿಗಳು ಸತ್ತು ಬಿದ್ದಿರುವ ವಿಷಯುಕ್ತ ಮೀನುಗಳನ್ನು ತಿನ್ನುತ್ತಿದ್ದು ಅವುಗಳೂ ಕೂಡ ಸಾಯುವ ಸಂಶಯ ವ್ಯಕ್ತವಾಗುತ್ತಿದೆ.
ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಈ ಕೆಲಸ ಯಾರೇ ಮಾಡಿರಲಿ ಅವರಿಗೆ ತಕ್ಕ ಶಿಕ್ಷೆಯಾಗಬೇಕು ಒಂದು ವೇಳೆ ಸರಿಯಾದ ಶಿಕ್ಷೆ ಆಗದೇ ಇದ್ದಲ್ಲಿ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ.

ಸ್ಥಳೀಯ ಒಂದು ತಂಡದ ಮೇಲೆ ಸಂಶಯ ವ್ಯಕ್ತ ಪಡಿಸಿದ ಸ್ಥಳೀಯರು ಆ ತಂಡವನ್ನು ಸರಿಯಾಗಿ ವಿಚಾರಿಸಿದರೆ ಸತ್ಯ ಹೊರಬರಬಹುದು ಎನ್ನುವ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಈ ಬಗ್ಗೆ ಶಾಸಕ ಹರೀಶ್ ಪೂಂಜ ಗಮನಕ್ಕೆ ತಂದ ಸ್ಥಳೀಯರು ಸೂಕ್ತ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

- Advertisement -
spot_img

Latest News

error: Content is protected !!