Saturday, April 20, 2024
Homeಕರಾವಳಿಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ದೇವಾಲಯದ ಗದ್ದೆಯಲ್ಲಿ ಚಾಲನೆ

ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ದೇವಾಲಯದ ಗದ್ದೆಯಲ್ಲಿ ಚಾಲನೆ

spot_img
- Advertisement -
- Advertisement -

ಬಂಟ್ವಾಳ: ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು.

ಪೊಳಲಿ ದೇವಸ್ಥಾನದ ಸುಮಾರು ೨ ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಭತ್ತದ ನಾಟಿ ಮಾಡುವ ಮೂಲಕ ಚಾಲನೆ ನೀಡಿದರು.

ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್., ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ಚೆನ್ನಕೇಶವಮೂರ್ತಿ, ತಾಂತ್ರಿಕ ಕೃಷಿ ಅಧಿಕಾರಿ ನಂದನ್ ಶೆಣೈ, ಪಾಣೆಮಂಗಳೂರು ಸಹಾಯಕ ಅಧಿಕಾರಿ ಕೊರಗಪ್ಪ, ಆತ್ಮ ಎಟಿಎಂ ಹನುಮಂತ ಕಲ್ಗಿ, ಕೃಷಿಕ ಸಮಾಜದ ಅಧ್ಯಕ್ಷ ಪದ್ಮರಾಜ್ ಬಲ್ಲಾಳ್ ಮವಂತೂರು, ರಾಜ್ಯ ಪ್ರತಿನಿಧಿ ಪದ್ಮನಾಭ ರೈ, ಸದಸ್ಯರಾದ ಗಣೇಶ್ ಶೆಟ್ಟಿ, ಎಸ್.ಹೊಳ್ಳ, ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ್ ನಾವಡ, ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ, ಬಂಟ್ವಾಳ ಬಿಜೆಪಿ ದೇವಪ್ಪ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!