Saturday, April 27, 2024
Homeಕರಾವಳಿಮಂಗಳೂರು: ಅನಗತ್ಯವಾಗಿ ರಾತ್ರಿ ವೇಳೆ ತಿರುಗಾಡುತ್ತಿದ್ದವರ ವಿರುದ್ಧ ಪೊಲೀಸರ ಕಾರ್ಯಾಚರಣೆ; ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆ!

ಮಂಗಳೂರು: ಅನಗತ್ಯವಾಗಿ ರಾತ್ರಿ ವೇಳೆ ತಿರುಗಾಡುತ್ತಿದ್ದವರ ವಿರುದ್ಧ ಪೊಲೀಸರ ಕಾರ್ಯಾಚರಣೆ; ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆ!

spot_img
- Advertisement -
- Advertisement -

ಮಂಗಳೂರು: ರಾತ್ರಿ ವೇಳೆ ಅನಗತ್ಯವಾಗಿ ದ್ವಿಚಕ್ರ ವಾಹನದಲ್ಲಿ ತಿರುಗಾಡುವವರ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ಕ್ಲಾಸ್ ತೆಗೆದುಕೊಂಡ ಘಟನೆ ನಡೆದಿದೆ.

ಹೆಲ್ಮೆಟ್ ರಹಿತವಾದ ಸಂಚಾರ, ತ್ರಿಬಲ್ ರೈಡಿಂಗ್, ಅಪಾಯಕಾರಿ ಜಾಲಿ ರೈಟಿಂಗ್, ಅತಿವೇಗದ ಚಾಲನೆ ಸೇರಿದಂತೆ ನಿಯಮ ಉಲ್ಲಂಘನೆ ಮಾಡುವವರನ್ನು ತಡೆದು ನಿಲ್ಲಿಸಿ ಅವರನ್ನು ಪುರಭವನಕ್ಕೆ ಕರೆದೊಯ್ದಿದ್ದಿದ್ದಾರೆ. ರಾತ್ರಿ 9:00 ಗಂಟೆಯಿಂದ ಸುಮಾರು ಎರಡು ತಾಸುಗಳ ಕಾಲ ನಗರದ ವಿವಿಧೆಡೆ ಪೊಲೀಸರು ಕಾರ್ಯಚರಣೆ ನಡೆಸಿದ್ದಾರೆ.

ಪುರಭವನದಲ್ಲಿ ಪೊಲೀಸ್ ಆಯುಕ್ತ ಶಶಿಕುಮಾರ್ ಕುಮಾರ್ ಮತ್ತು ಟ್ರಾಫಿಕ್ ವಿಭಾಗದ ಎಸಿಪಿ ನಟರಾಜನ್ ಅವರು ಸಂಚಾರ ನಿಯಮಗಳಿಗೆ ಸಂಬಂಧಿಸಿ ಮಾಹಿತಿ ನೀಡಿ ನಿಯಮ ಉಲ್ಲಂಘನೆ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಇನ್ನು ನೂರಕ್ಕೂ ಹೆಚ್ಚು ಮಂದಿಯ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಅವರೆಲ್ಲರ ವಿರುದ್ಧವೂ ಪ್ರಕರಣ ದಾಖಲಿಸಿದ್ದಾರೆ.ನಗರದಲ್ಲಿ ರಾತ್ರಿ ವೇಳೆ ಅನವಶ್ಯಕವಾಗಿ ದ್ವಿಚಕ್ರವಾಹನ ಸವಾರರು ಸಂಚಾರ ನಡೆಸುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!