- Advertisement -


- Advertisement -
ಮಂಗಳೂರು: ಬೋಳೂರು ಗ್ರಾಮದ ಸುಲ್ತಾನ್ ಬತ್ತೇರಿಯ ಫೆರಿ ಪಾಯಿಂಟ್ ಪಾರ್ಕಿಂಗ್ ಸ್ಥಳದ ಬಳಿ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬರ್ಕೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕೋಡಿಕಲ್ ಅಶೋಕ ನಗರದ ನಿವಾಸಿ ಧನೇಶ್ ಎಸ್. ಕುಮಾರ್ ಅಲಿಯಾಸ್ ಧನೇಶ್ (36) ಎಂದು ಗುರುತಿಸಲಾಗಿದೆ.
ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಧನೇಶ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಎಂಡಿಎಂಎ ಮಾರಾಟ ಮಾಡಲು ಬಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಆರೋಪಿಯಿಂದ 43 ಸಾವಿರ ರೂ. ಮೌಲ್ಯದ 4.30 ಗ್ರಾಂ ಎಂಡಿಎಂಎ, 10 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ 1 ಲಕ್ಷ ರೂ. ಮೌಲ್ಯದ ಸ್ಕೂಟರ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
- Advertisement -


