Wednesday, June 24, 2026
Homeಕರಾವಳಿಮಂಗಳೂರುಮಂಗಳೂರು: ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಕದ್ದ ಕಳ್ಳನನ್ನು ಬಂಧಿಸಿದ ಪೊಲೀಸರು

ಮಂಗಳೂರು: ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಕದ್ದ ಕಳ್ಳನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು: ರಸ್ತೆಯಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾವನ್ನು ಕದ್ದ ಕಳ್ಳನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಬಂಧಿತ ಆರೋಪಿ.

ಮುಹಮ್ಮದ್ ಶಾಝಿಲ್ ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ.
ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಾಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿಸೆಂಬರ್ 13ರಂದು ರಾತ್ರಿ ನಿಲ್ಲಿಸಿದ್ದರು. ಈ ರಿಕ್ಷಾವು ಕಳವಾಗಿದ್ದು, ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು.

- Advertisement -

Latest News

error: Content is protected !!