ಮಂಗಳೂರು; ವಿದೇಶದಲ್ಲಿ ಉದ್ಯೋಗಕ್ಕಾಗಿ ವೀಸಾ ಕೂಡಿಸುವುದಾಗಿ ಹಲವರಿಗೆ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಂಗಳೂರಿನ ಅನೇಕಲ್ ನ ಪ್ರಕೃತಿ ಯು (34), ಕುಂದಾಪುರದ ಗಂಗೊಳ್ಳಿ ನಿವಾಸಿ ಆಲ್ಟನ್ ರೆಬೇರೋ (42) ಬಂಧಿತರು.
ಆರೋಪಿತರುಗಳು ಇದೇ ರೀತಿ ಇನ್ನೂ ಸಹ ಹಲವಾರು ಜನರಿಗೆ ವಿಸಾ ಕೆಲಸ ಕೊಡುವುದಾಗಿ ನಂಬಿಸಿ ಅವರಿಂದ ಪಾಸ್ ಪೋರ್ಟ್‌ಗಳನ್ನು ಪಡೆದುಕೊಂಡು ಅವರ ಮನೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದರು. ಬಂಧಿತರಿಂದ ಸುಮಾರು 24 ಪಾಸ್ ಪೋರ್ಟ್‌ಗಳು, 43 ಗ್ರಾಂ ಬಂಗಾರ ಇದರ ಅಂದಾಜು ಮೌಲ್ಯ:4.30.000/- ಮತ್ತು 02 ಮೊಬೈಲ್‌ಗಳನ್ನು ಬೆಂಗಳೂರಿನಲ್ಲಿ ಸ್ವಾಧೀನಪಡಿಸಿಕೊಂಡು ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳನ್ನು ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ರವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶ್ರೀ ರಾಘವೇಂದ್ರ ಎಂ. ಬೈಂದೂರು ರವರು, ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ಮಲ್ಲಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಸಿಬ್ಬಂದಿಯಾದ ಹೆಚ್.ಸಿ ಗಳಾದ ನಾಗರತ್ನ, ಪಿ.ಸಿ.ಗಳಾದ, ರಾಘವೇಂದ್ರ, ಪ್ರವೀಣ್, ರಿಯಾಜ್, ರವರುಗಳೊಂದಿಗೆ ಆರೋಪಿತರನ್ನು ಪತ್ತೆಮಾಡಿ ದಸ್ತಗಿರಿ ಮಾಡಲಾಗಿರುತ್ತದೆ.


