Thursday, June 26, 2025
Homeಕರಾವಳಿಉಪ್ಪಿನಂಗಡಿ; ಗ್ರಾಹಕರ ಸೋಗಿನಲ್ಲಿ ಬಂದು ಮಹಿಳೆ ಚಿನ್ನ ಕದ್ದ ಪ್ರಕರಣ: ಕಳ್ಳತನ ಮಾಡಿದಾಕೆಯನ್ನು ಬಂಧಿಸಿದ ಉಪ್ಪಿನಂಗಡಿ...

ಉಪ್ಪಿನಂಗಡಿ; ಗ್ರಾಹಕರ ಸೋಗಿನಲ್ಲಿ ಬಂದು ಮಹಿಳೆ ಚಿನ್ನ ಕದ್ದ ಪ್ರಕರಣ: ಕಳ್ಳತನ ಮಾಡಿದಾಕೆಯನ್ನು ಬಂಧಿಸಿದ ಉಪ್ಪಿನಂಗಡಿ ಪೊಲೀಸರು

spot_img
- Advertisement -
- Advertisement -

ಉಪ್ಪಿನಂಗಡಿ; ಗ್ರಾಹಕರ ಸೋಗಿನಲ್ಲಿ ಬಂದು ಮಹಿಳೆ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಳ್ಳತನ ಮಾಡಿದಾಕೆಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಆಷತ್ ಶಮೀಲಾಬಿ ಬಂಧಿತ ಮಹಿಳೆ.

ಉಪ್ಪಿನಂಗಡಿ  ಹಳೇ ಬಸ್ ನಿಲ್ದಾಣದ ಬಳಿಯ ಚಿನ್ನಾಭರಣ ಮಳಿಗೆಯೊಂದಕ್ಕೆ ಕಳೆದ ಏಪ್ರಿಲ್ 17 ರಂದು ಗ್ರಾಹಕರ ಸೋಗಿನಲ್ಲಿ ಬಂದ ಆಷತ್ ಶಮೀಲಾಬಿ ಒಟ್ಟು 72 ಗ್ರಾಂ ತೂಕದ 4.80 ಲಕ್ಷ ರೂ ಮೌಲ್ಯದ ಚಿನ್ನಾಭರಣವನ್ನು ಎಗರಿಸಿದ್ದಳು.

ದಿನಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಎಂಬ ಚಿನ್ನಾಭರಣ ಅಂಗಡಿಗೆ ಏ.17 ರ ಗುರುವಾರದಂದು ಮಧ್ಯಾಹ್ನದ ವೇಳೆ  ಗ್ರಾಹಕರ ಸೋಗಿನಲ್ಲಿ ಬಂದ ಆಷತ್ ಶಮೀಲಾಬಿ ಮದುವೆ ಕಾರ್ಯಕ್ರಮಕ್ಕೆ 30 ಗ್ರಾಂ ಚಿನ್ನಾಭರಣ ಬೇಕಾಗಿದೆ. ನನ್ನ ಮನೆಯವರು ನಾಳೆ ಬಂದು ಹಣಕೊಟ್ಟು ಚಿನ್ನಾಭರಣವನ್ನು ತೆಗೆದುಕೊಳ್ಳುತ್ತಾರೆ. ನಾನೀಗ ಚಿನ್ನಾಭರಣವನ್ನು ಸೆಲೆಕ್ಟ್ ಮಾಡಿ ಹೋಗುತ್ತೇನೆ ಎಂದು ತಿಳಿಸಿದ್ದು, ಅಲ್ಲಿನ ಸಿಬ್ಬಂದಿ ಬೇರೆ ಬೇರೆ ನಮೂನೆಯ ಚಿನ್ನಾಭರಣವನ್ನು ಟ್ರೇಯಲ್ಲಿಟ್ಟು ತೋರಿಸಿದ್ದಾರೆ. ಅದರಲ್ಲಿನ ಕೆಲವೊಂದು ಆಭರಣವನ್ನು ಗುರುತಿಸಿ, ನಾಳೆ ದಿನ ನನ್ನ ಮನೆಯವರು ಬಂದು ಹಣಕೊಟ್ಟು ಈ ಎಲ್ಲಾ ಆಭರಣವನ್ನು ಖರೀದಿಸುತ್ತಾರೆ ಎಂದು ತಿಳಿಸಿ ಹೋಗಿದ್ದಳು.

ರಾತ್ರಿ ವೇಳೆ ಎಂದಿನಂತೆ ಚಿನ್ನಾಭರಣದ ಸ್ಟಾಕ್ ಚೆಕ್ ಮಾಡುವ ವೇಳೆ ಆಭರಣದ ಕೊರತೆ ಕಂಡು ಬಂದಿದ್ದು, ಪರಿಶೀಲನೆಯ ವೇಳೆ 24 ಗ್ರಾಂ ತೂಕದ ಚಿನ್ನದ ಕಾಲ್ ಚೈನ್ 2 ಜೊತೆ, 8 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್ ಒಂದು, 16 ಗ್ರಾಂ ತೂಕದ ಚಿನ್ನದ ಸರ ಒಂದು ಹೀಗೆ ಒಟ್ಟು 72 ಗ್ರಾಂ ತೂಕದ ಚಿನ್ನಾಭರಣವನ್ನು ಗ್ರಾಹಕರ ಸೋಗಿನಲ್ಲಿ ಬಂದ ಬುರ್ಕಾಧಾರಿ ಮಹಿಳೆ ಎಗರಿಸಿರುವುದು ಕಂಡು ಬಂದಿತ್ತು. ಎಗರಿಸಲ್ಪಟ್ಟ ಚಿನಾಭರಣದ ಮೌಲ್ಯ 4.80 ಲಕ್ಷ ಎಂದು ದೂರಲಾಗಿತ್ತು.

ಇನ್ನು  ಚಿನ್ನಾಭರಣ ಅಂಗಡಿಗೆ ತಂದು ಮಾರಾಟಕ್ಕೆ ಯತ್ನಿಸಿದಾಗ ಆರೋಪಿ ಮಹಿಳೆ ಸಿಕ್ಕಿ ಬಿದ್ದಿದ್ದಾಳೆ. . ಸಂಶಯಗೊಂಡ ಆಭರಣ ಅಂಗಡಿ ಮಾಲಕ ಪೊಲೀಸರಿಗೆ ಮಾಹಿತಿ ನೀಡಿ ವಿಚಾರಿಸಿದಾಗ ಕಳವು ಕೃತ್ಯವನ್ನು ಒಪ್ಪಿಕೊಂಡಿದ್ದಾಳೆ. ಆರೋಪಿತೆಯ ವಿರುದ್ದ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!