- Advertisement -
- Advertisement -
ಸುಳ್ಯ; ವಿದ್ಯಾರ್ಥಿನಿಯೊಂದಿಗೆ ಬಸ್ ನಲ್ಲಿ ಅನುಚಿತವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಯುವಕನನ್ನು ಬಂಧಿಸುವಂತೆ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡಿದ ಬೆನ್ನಲ್ಲೇ ಪೊಲೀಸರು ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ನನ್ನು ಅಲ್ಲಿಂದಲೇ ಬಂಧಿಸಿದ್ದಾರೆ. ಇನ್ನು ಯುವಕನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇದೀಗ ಸುಳ್ಯ ಪೋಲಿಸ್ ಅಧಿಕಾರಿಗಳು ಆರೋಪಿತ ನಿಯಾಜ್ ನನ್ನು ಬಂಧಿಸಿ ಕರೆತಂದಿದ್ದು ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ ಎನ್ನಲಾಗಿದೆ.
- Advertisement -