Friday, April 19, 2024
Homeಕರಾವಳಿಅಪ್ರಾಪ್ತೆಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತನೆ : ಮಂಗಳೂರಿನಲ್ಲಿ ಪೊಲೀಸಪ್ಪನ ಬಂಧನ

ಅಪ್ರಾಪ್ತೆಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತನೆ : ಮಂಗಳೂರಿನಲ್ಲಿ ಪೊಲೀಸಪ್ಪನ ಬಂಧನ

spot_img
- Advertisement -
- Advertisement -

ಮಂಗಳೂರು: ಲೈಂಗಿಕ ಕಿರುಕುಳಕ್ಕೆ ಸಂಬಂಧ ಪಟ್ಟಂತೆ ದೂರು ನೀಡಲು ಬಂದ ಅಪ್ರಾಪ್ತ ಬಾಲಕಿಯ ಮೊಬೈಲ್ ನಂಬರ್ ಪಡೆದು ಆಕೆಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಒಬ್ಬರನ್ನು ಬಂಧಿಸಲಾಗಿದೆ. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಇಂದು ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ರಿಕ್ಷಾ ಚಾಲಕನೊಬ್ಬ ಚುಡಾಯಿಸುತ್ತಿರುವ ಬಗ್ಗೆ ಜನವರಿ ತಿಂಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ದಾಖಲಿಸುವ ಸಂದರ್ಭದಲ್ಲಿ ಹೆಡ್ ಕಾನ್ಸ್​ಟೇಬಲ್ ಬಾಲಕಿಯ ನಂಬರ್ ಪಡೆದುಕೊಂಡು ಮೆಸೇಜ್ ಮಾಡಲು ಆರಂಭಿಸಿದ್ದಾನೆ.ಅಪ್ರಾಪ್ತ ಬಾಲಕಿಗೆ ಮೆಸೇಜ್ ಮಾಡಿ ಭೇಟಿಯಾಗಬೇಕು, ಮನೆಯಲ್ಲಿ ಒಬ್ಬನೇ ಇದ್ದೇನೆ ಬರ್ತಿಯಾ ಎಂಬ ಮೆಸೇಜ್​ಗಳನ್ನು ಮಾಡಿ ಅನುಚಿತವಾಗಿ ವರ್ತಿಸಿದ್ದ. ಈ ಬಗ್ಗೆ ಬಾಲಕಿ ಪೋಷಕರಿಗೆ ತಿಳಿಸಿದ್ದು, ಪೋಷಕರು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಿದ್ದರು.

ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ವಿಚಾರ ತಿಳಿಸಿದ್ದು, ಬಾಲಕಿಯ ದೂರನ್ನು ಪಡೆದು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ತಕ್ಷಣ ಆರೋಪಿ ಪೊಲೀಸ್​ನನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!