Wednesday, June 3, 2026
Homeತಾಜಾ ಸುದ್ದಿಕೇರಳದಿಂದ ಕರ್ನಾಟಕಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡ ಅರೆಸ್ಟ್

ಕೇರಳದಿಂದ ಕರ್ನಾಟಕಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡ ಅರೆಸ್ಟ್

- Advertisement -
- Advertisement -

ಮಂಗಳೂರು: ಕೇರಳದಿಂದ ಕರ್ನಾಟಕಕ್ಕೆ ಗಾಂಜಾ ಮತ್ತು ಡ್ರಗ್ಸ್ ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ.

ಮೂವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 111 ಕೆಜಿ ಗಾಂಜಾ ಮತ್ತು 27 ಲಕ್ಷ ರೂಪಾಯಿ ಮೌಲ್ಯದ ಮಾದಕ ದ್ರವ್ಯವನ್ನು ವಶಪಡಿಸಿಕೊಂಡಿದ್ದಾರೆ.

ಕಾಸರಗೋಡು ನಿವಾಸಿಗಳಾದ ಅಬೂಬಕ್ಕರ್ ಸಿದ್ದಿಕಿ ಅಲಿಯಾಸ್ ಹ್ಯಾರಿಸ್, ಅಖಿಲ್ ಎಂ., ಹೈದರ್ ಅಲಿ ಅಲಿಯಾಸ್ ಗಾಡಿ ಹೈದರ್ ಬಂಧಿತ ಆರೋಪಿಗಳಾಗಿದ್ದಾರೆ.ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!