Saturday, April 27, 2024
Homeಕರಾವಳಿಶಾಂತಿಗೋಡು ಗ್ರಾಮದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಐವರ ಬಂಧನ!

ಶಾಂತಿಗೋಡು ಗ್ರಾಮದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ಐವರ ಬಂಧನ!

spot_img
- Advertisement -
- Advertisement -

ಪುತ್ತೂರು: ಪುತ್ತೂರು ನಗರ ಠಾಣಾ ಪೊಲೀಸರು ಶಾಂತಿಗೋಡು ಗ್ರಾಮದ ವೀರಮಂಗಲದ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದಲ್ಲಿಗೆ ದಾಳಿ ನಡೆಸಿ ಕೋಳಿಗಳನ್ನು ಹಾಗೂ ಕೋಳಿ ಅಂಕದಲ್ಲಿ ನಿರತರಾಗಿದ್ದ ಐವರನ್ನು ಬಂಧಿಸಿದ ಘಟನೆ ಶುಕ್ರವಾರದಂದು ನಡೆದಿದೆ.

ದಾಳಿಯಲ್ಲಿ 10 ಕೋಳಿ, 1 ಆಟೋ ರಿಕ್ಷಾವನ್ನು ವಶಕ್ಕೆ ಪಡೆದು ಕೋಳಿ ಅಂಕದಲ್ಲಿ ನಿರತರಾಗಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ ಕುಶಾಲಪ್ಪಗೌಡ, ಪ್ರಶಾಂತ್ ಕುಮಾರ್, ಬಾಬು ಆಜಿಲ, ಸುರೇಶ್ ರೈ, ಚೆನ್ನಪ್ಪ ಗೌಡ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಜೂಜಾಟಕ್ಕೆ ಬಳಸಿದ್ದ 10 ಕೋಳಿಗಳನ್ನು ಮತ್ತು ಕೃತ್ಯಕ್ಕೆ ಬಳಸಿದ ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆದುಕೊಂಡಿದ್ದು ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ.52,200 ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!