Saturday, May 18, 2024
Homeತಾಜಾ ಸುದ್ದಿರಾಜ್ಯದಲ್ಲಿನ್ನು ಪೊಲೀಸರು ವಾಹನ‌‌‌ ನಿಲ್ಲಿಸಿ ತಪಾಸಣೆ ‌ನಡೆಸುವಂತಿಲ್ಲ: ಎಲ್ಲಾ ಎಸ್ಪಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಆದೇಶ

ರಾಜ್ಯದಲ್ಲಿನ್ನು ಪೊಲೀಸರು ವಾಹನ‌‌‌ ನಿಲ್ಲಿಸಿ ತಪಾಸಣೆ ‌ನಡೆಸುವಂತಿಲ್ಲ: ಎಲ್ಲಾ ಎಸ್ಪಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇನ್ನು ಮುಂದೆ ಸುಖಾ ಸುಮ್ಮನೆ ಪೊಲೀಸರು ವಾಹನ ನಿಲ್ಲಿಸಿ ತಪಾಸಣೆ ನಡೆಸುವಂತಿಲ್ಲ.

ಈ ಸಂಬಂಧ ರಾಜ್ಯದ ಎಲ್ಲಾ ಜಿಲ್ಲೆಗಳ ಎಸ್ಪಿಗಳಿಗೆ ಡಿಜಿಪಿ ಪ್ರವೀಣ್ ಸೂದ್ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಗಳಲ್ಲಿ, ಹೆದ್ದಾರಿಗಳಲ್ಲಿ ಕಾರಣವಿಲ್ಲದೇ ವಾಹನ ನಿಲ್ಲಿಸಿ ತಪಾಸಣೆ ನಡೆಸದಂತೆ ಡಿಜಿಪಿ ಪೊಲೀಸರಿಗೆ ಸೂಚಿಸಿದ್ದಾರೆ.

ಡ್ರಿಂಕ್ ಅಂಡ್ ಡ್ರೈವ್ ಮತ್ತು ಕಣ್ಣಿಗೆ ಕಾಣುವ ನಿಯಮ ಉಲ್ಲಂಘನೆ ಹೊರತುಪಡಿಸಿ ರಸ್ತೆಗಳಲ್ಲಿ ಯಾವುದೇ ವಾಹನಗಳನ್ನು ಇನ್ನು ಮುಂದೆ ಪೊಲೀಸರು ನಿಲ್ಲಿಸಿ ಸುಖಾ ಸುಮ್ಮನೆ ತಪಾಸಣೆ ನಡೆಸುವಂತಿಲ್ಲ.

ಒಂದು ವೇಳೆ ಈ ಸೂಚನೆ ಉಲ್ಲಂಘನೆ ಮಾಡಿದಲ್ಲಿ ಪೊಲೀಸರ ವಿರುದ್ಧ ಕ್ರಮ‌ ಕೈಗೊಳ್ಳಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ಎಚ್ಚರಿಕೆ ನೀಡಿದ್ದು, ತಮ್ಮ ಕೆಳಗಿನ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಎಸ್ಪಿಗಳಿಗೆ ಆದೇಶಿಸಿದ್ದಾರೆ.

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಮಾತ್ರ ವಾಹನ‌‌‌ ನಿಲ್ಲಿಸಿ ತಪಾಸಣೆ ನಡೆಸದಂತೆ ಪೊಲೀಸರಿಗೆ ಸೂಚಿಸಲಾಗಿತ್ತು.‌ ಇದೀಗ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಡಿಜಿಪಿ ಆದೇಶ ಹೊರಡಿಸಿದ್ದಾರೆ.‌

- Advertisement -
spot_img

Latest News

error: Content is protected !!