Thursday, June 4, 2026
Homeಕರಾವಳಿಆತೂರು ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರ ಬಂಧನ

ಆತೂರು ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರ ಬಂಧನ

- Advertisement -
- Advertisement -

ಕಡಬ: ಕಡಬದ ಆತೂರು ಎಂಬಲ್ಲಿ ಪೊಲೀಸ್ ಚೆಕ್ ಪೋಸ್ಟ್ ಧ್ವಂಸ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ತೌಸೀಫ್(30) ಮತ್ತು ಕೊಯಿಲ ಗ್ರಾಮದ ಸನ್ಯಾಸಿ ಮೂಲೆ ನಿವಾಸಿ ಮಹಮ್ಮದ್ ಶಾಕಿರ್(25) ಬಂಧಿತರು. ಜೂನ್ 29 ರಂದು ಆತೂರು ಚೆಕ್ ಪೋಸ್ಟ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಗೂಡ್ಸ್ ವಾಹನವೊಂದು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರು ಮೃತಪಟ್ಟಿದ್ದರು. ಈ ವೇಳೆ ಆಕ್ರೋಶಗೊಂಡ ಸಾರ್ವಜನಿಕರು ಪೊಲೀಸ್ ಚೆಕ್ ಪೋಸ್ಟ್ ಧ್ವಂಸಗೊಳಿಸಿದ್ದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜುಲೈ 27 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಮಂದಿಯನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!