Monday, April 29, 2024
Homeಕರಾವಳಿಮಂಗಳೂರಿನಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು: ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳು ವಶಕ್ಕೆ

ಮಂಗಳೂರಿನಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರು: ಅನಗತ್ಯವಾಗಿ ಓಡಾಡುತ್ತಿದ್ದ ವಾಹನಗಳು ವಶಕ್ಕೆ

spot_img
- Advertisement -
- Advertisement -

ಮಂಗಳೂರು: ನಗರದಲ್ಲಿ ನಿನ್ನೆ ರಾತ್ರಿ ನಗರ ಪೊಲೀಸ್ ಆಯುಕ್ತರು ದಿಢೀರ್ ಕಾರ್ಯಾಚರಣೆ ನಡೆಸಿ ಕಠಿಣ ಕರ್ಫ್ಯೂ ನಡುವೆ ಅನಗತ್ಯ ತಿರುಗುತ್ತಿದ್ದವರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಬಿಸಿ ಮುಟ್ಟಿಸಿದ್ದಾರೆ‌.

ಕೊರೊನಾ ಕರ್ಫ್ಯೂ ಇದ್ದರೂ ಮಂಗಳೂರು ನಗರದಲ್ಲಿ ಅನಗತ್ಯ ತಿರುಗಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದ್ದವು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚಳವಾಗುತ್ತಿರುವುದರಿಂದ ಶುಕ್ರವಾರದಿಂದ ಕೊರೊನಾ ಕರ್ಫ್ಯೂವನ್ನು ಬಿಗಿಗೊಳಿಸಲು ನಿರ್ಧರಿಸಲಾಗಿತ್ತು.

ಈ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಅವರು ಮಂಗಳೂರು ನಗರದ ಕೆಪಿಟಿ ಸರ್ಕಲ್ ಬಳಿ ದಿಢೀರ್ ದಾಳಿ ನಡೆಸಿದ್ದಾರೆ.

ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ಅನಗತ್ಯ ತಿರುಗಾಡುವವರಿಗೆ ಬಿಸಿ ಮುಟ್ಟಿಸಲಾಗಿದೆ. ಅನಗತ್ಯ ತಿರುಗಾಡುತ್ತಿದ್ದವರ ಕಾರು, ಬೈಕ್​​ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಾಹನಗಳಲ್ಲಿ ಅನಧಿಕೃತವಾಗಿ ಅಂಟಿಸಲಾಗಿದ್ದ ಅಗತ್ಯ ಸೇವೆ ಸ್ಟಿಕರ್​ಗಳನ್ನು ಕಿತ್ತೆಗೆದು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -
spot_img

Latest News

error: Content is protected !!