Wednesday, May 8, 2024
Homeಕರಾವಳಿಮಂಗಳೂರು; ಖಾಸಗಿ ಕಾಲೇಜು ವಿದ್ಯಾರ್ಥಿಗಳ‌ ವಿಡಿಯೋ ವೈರಲ್ ಪ್ರಕರಣ; ಸೆಕ್ಸ್ ವಿಡಿಯೋ ವಿದ್ಯಾರ್ಥಿಗಳದ್ದು ಅಲ್ಲ ಎಂದ...

ಮಂಗಳೂರು; ಖಾಸಗಿ ಕಾಲೇಜು ವಿದ್ಯಾರ್ಥಿಗಳ‌ ವಿಡಿಯೋ ವೈರಲ್ ಪ್ರಕರಣ; ಸೆಕ್ಸ್ ವಿಡಿಯೋ ವಿದ್ಯಾರ್ಥಿಗಳದ್ದು ಅಲ್ಲ ಎಂದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ನಗರದ ಪ್ರತಿಷ್ಠಿತ  ಖಾಸಗಿ ಕಾಲೇಜು ವಿದ್ಯಾರ್ಥಿಗಳ ಲಿಪ್ ಲಾಕ್ ಕಿಸ್ಸಿಂಗ್ ವಿಡಿಯೋ ವೈರಲ್ ಆಗಿ ಭಾರೀ ಸುದ್ದಿ ಮಾಡಿತ್ತು. ಇದರ ಬೆನ್ನಲ್ಲೇ ಸೆಕ್ಸ್ ವಿಡಿಯೋವೊಂದು ವೈರಲ್ ಆಗಿತ್ತು. ಇದೀಗ ಈ ಬಗ್ಗೆ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿರುವ ಸುಮಾರು 20 ಸೆಕೆಂಡ್‌ಗಳ ವೀಡಿಯೋ ಹೊರತುಪಡಿಸಿ ಬೇರೆ ಯಾವುದೇ ವೀಡಿಯೋಗಳಿಲ್ಲ. ಇತರ ಕೆಲವು ಅಶ್ಲೀಲ ವೀಡಿಯೋಗಳನ್ನು ಕೆಲವು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಆ ವೀಡಿಯೋ ಮತ್ತು ಚುಂಬನ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಪ್ರಕರಣಕ್ಕೆ  ಸಂಬಂಧಿಸಿ ಪೊಲೀಸರು ಒಟ್ಟು 5 ಮಂದಿ ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಬಂಧಿತರೆಲ್ಲರೂ ಅಪ್ರಾಪ್ತ ವಯಸ್ಸಿನವರಾಗಿದ್ದು, ಅವರನ್ನು ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿ ಹೆತ್ತವರಿಗೆ ಒಪ್ಪಿಸಿದೆ. ಅಗತ್ಯಬಿದ್ದಾಗ ತನಿಖಾಧಿಕಾರಿ ಯವರ ಮುಂದೆ ಹಾಜರಾಗುವಂತೆ ಆದೇಶ ನೀಡಿದೆ.

ಬಂಧಿತರಲ್ಲಿ ವೀಡಿಯೋ ಚಿತ್ರೀಕರಣ ಮಾಡಿದವನು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಮಾಡಿದವನು ಕೂಡ ಸೇರಿದ್ದಾರೆ. ಒಟ್ಟು ಸುಮಾರು 8 ಮಂದಿ ವಿದ್ಯಾರ್ಥಿಗಳು ಈ ಕೃತ್ಯದಲ್ಲಿ ಭಾಗವಹಿಸಿದ್ದು, ಈ ಪೈಕಿ ಓರ್ವ ಈಗಾಗಲೇ ವಿದೇಶಕ್ಕೆ ತೆರಳಿದ್ದಾನೆ ಎಂದು ತಿಳಿದು‌ ಬಂದಿದೆ‌. ಕೃತ್ಯಕ್ಕೆ ಸಂಬಂಧಿಸಿ ಪೋಕ್ಸೋ ಕಾಯ್ದೆಯಡಿ ಮಹಿಳಾ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

- Advertisement -
spot_img

Latest News

error: Content is protected !!