Friday, May 3, 2024
Homeಕರಾವಳಿಮಂಗಳೂರಿನಲ್ಲಿ 10 ಲಕ್ಷ ರೂಪಾಯಿಯ ಬಿದ್ದು ಸಿಕ್ಕಿದ ಪ್ರಕರಣ: ನಿಜಕ್ಕೂ ಸಿಕ್ಕಿದ ಹಣವೆಷ್ಟು? ಪೊಲೀಸ್ ಕಮೀಷನರ್...

ಮಂಗಳೂರಿನಲ್ಲಿ 10 ಲಕ್ಷ ರೂಪಾಯಿಯ ಬಿದ್ದು ಸಿಕ್ಕಿದ ಪ್ರಕರಣ: ನಿಜಕ್ಕೂ ಸಿಕ್ಕಿದ ಹಣವೆಷ್ಟು? ಪೊಲೀಸ್ ಕಮೀಷನರ್ ಶಶಿಕುಮಾರ್ ರಿಂದ ಸ್ಪಷ್ಟನೆ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಪಂಪ್ ವೆಲ್ ನಲ್ಲಿ ವ್ಯಕ್ತಿಯೊಬ್ಬರಿಗೆ 10 ಲಕ್ಷ ರೂಪಾಯಿಯ ನೋಟಿನ ಕಂತೆ ಬಿದ್ದು ಸಿಕ್ಕಿದೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಸ್ವತಃ ಮಂಗಳೂರಿನ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರೇ ಸ್ಪಷ್ಟನೆ ನೀಡಿದ್ದಾರೆ.

 ಮೆಕ್ಯಾನಿಕ್ ಶಿವರಾಜ್ ಸಿಕ್ಕಿದ್ದ ಹಣದ ಬಂಡಲ್ ಪ್ರಕರಣದಲ್ಲಿ ಇದುವರೆಗೆ 3,48,500 ರೂಪಾಯಿ ಹಣ ಪೊಲೀಸ್ ವಶದಲ್ಲಿದ್ದು, ವಾರಸುದಾರರಿದ್ದರೆ ಸೂಕ್ತ ದಾಖಲೆ ನೀಡಿ ಹಣ ಪಡೆಯಬಹುದೆಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.


ನವೆಂಬರ್ 26ರಂದು ಶಿವರಾಜ್ ಎಂಬ ವ್ಯಕ್ತಿಗೆ ಬೆಳಗ್ಗಿನ ಹೊತ್ತು ಪಂಪ್‌ವೆಲ್ ಬಳಿ ಬಾಕ್ಸ್ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ಹಣದ ಬಂಡಲ್‌ಗಳು ಸಿಕ್ಕಿತ್ತು. ಅದರಲ್ಲಿ ಎಷ್ಟು ಹಣ ಇತ್ತೆಂಬ ಬಗ್ಗೆ ಸ್ಪಷ್ಟವಾಗಿ ಆ ವ್ಯಕ್ತಿ ಹೇಳುತ್ತಿಲ್ಲ. ಮಾಧ್ಯಮದಲ್ಲಿ 10 ಲಕ್ಷ ಹಣದ ಕವರ್ ಸಿಕ್ಕಿರುವುದಾಗಿ ವರದಿಯಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಹಣ ದೊರೆತಿರುವ ಪ್ರದೇಶದ ಸಿಸಿ ಕ್ಯಾಮರಾ ಕೂಡಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಶಿವರಾಜ್ ಹಣದ ಕಟ್ಟು ಸಿಕ್ಕಿದ ತನ್ನ ಜತೆ ಮದ್ಯಪಾನ ಮಾಡುವ ವ್ಯಕ್ತಿ ತುಕರಾಂ ಎಂಬವರಿಗೆ 500 ರೂ.ಗಳ ಆರು ಕಟ್ಟು ಹಣವನ್ನು ನೀಡಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆ ಮಾದ್ಯಮದಲ್ಲಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ತುಕರಾಂ ಎಂಬ ವ್ಯಕ್ತಿ 2,99,500 ರೂ.ಗಳನ್ನು ಠಾಣೆಗೆ ತಂದು ನೀಡಿದ್ದಾನೆ.

ಒಟ್ಟು ಇದೀಗ ತುಕರಾಂ ತಂದು ಕೊಟ್ಟ 2,99,500 ಮತ್ತು 49,000 ರೂ. ಪೊಲೀಸರ ವಶದಲ್ಲಿದೆ. ಅದನ್ನು ಸೂಕ್ತ ದಾಖಲೀಕರಣದೊಂದಿಗೆ ಪೊಲೀಸರ ವಶದಲ್ಲಿರಿಸಲಾಗಿದೆ. ವಾರಿಸುದಾರರು ಬಾರದಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಈಗಾಗಲೇ ಅದರಲ್ಲಿ 10 ಲಕ್ಷ ಇತ್ತೆಂದು ಹೇಳಲಾಗಿರುವಂತೆ, ಯಾರಾದರೂ ಶಿವರಾಜ್ ಬಳಿ ಇದ್ದ ಹಣವನ್ನು ಕೊಂಡು ಹೋಗಿದ್ದಲ್ಲಿ ಅದನ್ನು ಠಾಣೆಗೆ ಒಪ್ಪಿಸಿದರೆ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಿಸಲಾಗುವುದಿಲ್ಲ. ಒಂದು ವೇಳೆ ತನಿಖೆಯ ವೇಳೆ, ಸಿಸಿ ಕ್ಯಾಮರಾ ಫೂಟೇಜ್ ತಪಾಸಣೆಯ ಸಂದರ್ಭ ಯಾರಾದರೂ ಶಿವರಾಜ್ ಬಳಿ ಇದ್ದ ಹಣ ಕದ್ದುಕೊಂಡು ಹೋಗಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸುಲಿಗೆ, ದರೋಡೆ ಪ್ರಕರಣ ದಾಖಲಾಗುತ್ತದೆ ಎಂದಿದ್ದಾರೆ.

- Advertisement -
spot_img

Latest News

error: Content is protected !!