ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ಮತ್ತು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ರಕ್ಷಿತ್ ಶಿವರಾಂ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸ್ ದೂರು ದಾಖಲು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ವಿಚಾರವಾಗಿ ಪ್ರತಿಭಟನೆ ವೇಳೆ ಬಾಂಗ್ಲಾದೇಶದ ಮಾದರಿಯಲ್ಲಿ ಪ್ರತಿಭಟನೆ ನಡೆಯುತ್ತದೆ ಎಂದು ಐವನ್ ಡಿಸೋಜಾ ರಾಜ್ಯಪಾಲರ ವಿರುದ್ದ ಹೇಳಿಕೆ ನೀಡಿದ್ದಕ್ಕೆ ಮತ್ತು ಬಾಂಗ್ಲಾದೇಶದ ಪ್ರಧಾನಿಗೆ ಆದ ಪರಿಸ್ಥಿತಿಯೇ ಪ್ರಧಾನಿ ನರೇಂದ್ರ ಮೋದಿಗೂ ಆಗುತ್ತದೆ ಎಂಬ ರಕ್ಷಿತ್ ಶಿವರಾಂ ಹೇಳಿಕೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಿಯೋಗ ದೂರು ದಾಖಲಿಸಲಾಗಿದೆ.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ನೇತೃತ್ವದಲ್ಲಿ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಐವಾನ್ ಡಿಸೋಜಾ ಮತ್ತು ರಕ್ಷಿತ್ ಶಿವರಾಂ ವಿರುದ್ಧ ಕೂಡಲೇ ಎಫ್ ಐಆರ್ ದಾಖಲಿಸಿ ಬಂಧನಕ್ಕೊಳಪಡಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.


