- Advertisement -
![]()
- Advertisement -
ಮಂಗಳೂರು; ನವವಿವಾಹಿತ ಪೊಲೀಸ್ ಕಾನ್ಸ್ಟೇಬಲ್ ನೇಣಿಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬೆಳಗಾವಿಯ ಸವದತ್ತಿಯ ಮಹೇಶ್ (31) ಮೃತ ದುರ್ದೈವಿ.
ದಕ್ಷಿಣ ಸಂಚಾರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್, ಕಪಿತಾನಿಯೋ ಬಳಿಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಒಂದುವರೆ ತಿಂಗಳ ಹಿಂದೆಯಷ್ಟೇ ಮಹೇಶ್ ವಿವಾಹವಾಗಿದ್ದರು ಎನ್ನಲಾಗಿದ್ದು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


