Saturday, June 6, 2026
Homeಕರಾವಳಿಮಂಗಳೂರುಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಾವು

ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಾವು

- Advertisement -
- Advertisement -

ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪೊಲೀಸ್ ಕಾನ್ಸ್ ಟೇಬಲ್ ಸಾವನ್ನಪ್ಪಿದ ಘಟನೆ ನಡೆದಿದೆ. ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಮೃತ ದುರ್ದೈವಿ.


ಹರೀಶ್ ಅವರು ಮೈಸೂರು ಜಿಲ್ಲೆಯ ಕೆ.ಆರ್ ನಗರ ತಾಲೂಕಿನ ಗಾಯನಹಳ್ಳಿ ನಿವಾಸಿಯಾಗಿದ್ದು, ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಜೆಗೆ ಊರಿಗೆ ತೆರಳಿದ್ದ ಅವರು ಬುಧವಾರ ವಾಪಾಸ್ ಬರುವ ಸಂದರ್ಭ ಸುಳ್ಯ ಸಮೀಪ ಅಪಘಾತಕ್ಕೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!