Thursday, June 4, 2026
Homeಕರಾವಳಿಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಮಂಗಳೂರಿನ ಪೊಲೀಸ್ ಕಾನ್‌ಸ್ಟೇಬಲ್ !

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಮಂಗಳೂರಿನ ಪೊಲೀಸ್ ಕಾನ್‌ಸ್ಟೇಬಲ್ !

- Advertisement -
- Advertisement -

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ಬಸವನ ಬಾಗೆವಾಡಿ ನಿವಾಸಿ ಸಾಯಬಣ್ಣ ಅತ್ಯಾಚಾರ ನಡೆಸಿದ ಆರೋಪಿ. ಈತನೊಂದಿಗೆ ಸೇರಿ ಬೆಂಗಳೂರಿನ ರಮೇಶ್ ಗೌಡ ಎಂಬಾತ ಬೆದರಿಕೆಯೊಡ್ಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.

ಫೇಸ್‌ಬುಕ್ ಮೂಲಕ ಪರಿಚಯವಾದ ಸಾಯಬಣ್ಣ 20ರಂದು ಮದುವೆ ಮಾತುಕತೆಗಾಗಿ ಬೆಂಗಳೂರಿಗೆ ಬಂದಿದ್ದು, ನಂತರ ನಾವಿಬ್ಬರು ನಗರದ ಲಾಡ್ಜ್ ಒಂದರಲ್ಲಿ ರೂಮ್ ಮಾಡಿದೆವು. ಈ ಸಮಯದಲ್ಲಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ಪೊಲೀಸ್ ಕ್ವಾಟ್ರಸ್ ಗೂ ಕರೆಸಿಕೊಂಡು ಅತ್ಯಾಚಾರ ಎಸಗಿದ್ದು, ಈಗ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಸಾಯಬಣ್ಣ ವಿರುದ್ಧ ಪೊಲೀಸ್ ದೂರು ನೀಡುತ್ತೇನೆ ಎಂದು ಯುವತಿ ಹೇಳಿದಾಗ ನಾವು ಪೊಲೀಸರು ನಮ್ಮ ವಿರುದ್ಧ ಕೇಸು ದಾಖಲಿಸಿದರೆ ನಿನ್ನ ವಿರುದ್ಧವೂ ಕೇಸ್ ದಾಖಲಿಸಿ ನಿನ್ನ ಮಾನಹರಾಜು ಹಾಕುತ್ತೇವೆ ಎಂದು ಸಾಯಬಣ್ಣನ ಸ್ನೇಹಿತ ರಮೇಶ್ ಗೌಡ ಬೆದರಿಕೆ ಹಾಕಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಕ್ರಮ ಕೈಗೊಂಡು ನ್ಯಾಯ ದೊರಕಿಸಿಕೊಡುವಂತೆ ಯುವತಿ ಇಂದು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Latest News

error: Content is protected !!