Thursday, June 4, 2026
Homeಕರಾವಳಿಮಂಗಳೂರಿನಲ್ಲಿ ಕುಸಿದು ಬಿದ್ದು ಸಹಾಯಕ ಪೊಲೀಸ್ ಉಪನಿರೀಕ್ಷಕ ಸಾವು

ಮಂಗಳೂರಿನಲ್ಲಿ ಕುಸಿದು ಬಿದ್ದು ಸಹಾಯಕ ಪೊಲೀಸ್ ಉಪನಿರೀಕ್ಷಕ ಸಾವು

- Advertisement -
- Advertisement -

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಕುಸಿದು ಬಿದ್ದು ಸಹಾಯಕ ಪೊಲೀಸ್ ಉಪನಿರೀಕ್ಷಕರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಎ.ಬಿ .ಶೆಟ್ಟಿ ಸರ್ಕಲ್ ಬಳಿ ನಡೆದಿದೆ. ತಿಪ್ಪಣ್ಣ ನಾಗವ್ವ ಮಾದರ(37) ಮೃತ ದುರ್ದೈವಿ.

ಮೂಲತಃ ಬೆಳಗಾವಿಯ ರಾಮದುರ್ಗಾ ಹೊಸೂರು ನಿವಾಸಿಯಾಗಿದ್ದ ತಿಪ್ಪಣ್ಣ ಅವರು ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆಯ ವೇಳೆಗೆ ಪಾಂಡೇಶ್ವರದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್. ಪಿ. ಕಛೇರಿಯಲ್ಲಿರುವ ಬೆರಳು ಮುದ್ರೆ ಘಟಕದ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಎ.ಬಿ .ಶೆಟ್ಟಿ ಸರ್ಕಲ್ ಬಳಿ ಅಸ್ವಸ್ತಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

2011ರಲ್ಲಿ ಪೊಲೀಸ್ ಕಾನ್ ಸ್ಟೇಬಲ್ ಆಗಿ ಇಲಾಖೆಗೆ ಸೇರ್ಪಡೆಗೊಂಡಿದ್ದು, ಬಾಗಲಕೋಟೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯದಲ್ಲಿದ್ದವರು ಮುಂಬಡ್ತಿಗೊಂಡು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಎ.ಎಸ್.ಐ. (ಎಫ್.ಪಿ.ಬಿ.) ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ್ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

- Advertisement -

Latest News

error: Content is protected !!