Monday, June 8, 2026
Homeಕರಾವಳಿಉಡುಪಿ10 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿಯಾದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನ ‘ಐಕಾನ್‌’

10 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತಿಯಾದ ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನ ‘ಐಕಾನ್‌’

- Advertisement -
- Advertisement -

ಉಡುಪಿ ಜಿಲ್ಲೆಯ ಪೊಲೀಸ್‌ ಶ್ವಾನದಳದಲ್ಲಿ ಕಳೆದ 10 ವರ್ಷಗಳಿಂದ ಸ್ಫೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಶ್ವಾನ ‘ಐಕಾನ್‌’ ನಿವೃತ್ತಿ ಹೊಂದಿದೆ.

ನವೆಂಬರ್ 5, 2014 ರಂದು ಶ್ವಾನದಳ ವಿಭಾಗಕ್ಕೆ ಸೇರ್ಪಡೆಗೊಂಡ ಲ್ಯಾಬ್ರಡಾರ್‌ ರಿಟ್ರೀವರ್‌ ತಳಿಯ ಈ ಶ್ವಾನವು ಆಗಸ್ಟ್ 5, 2014 ರಂದು ಜನಿಸಿದ್ದು, ಎಪಿಸಿ. ಗಣೇಶ ಎಂ. 1444 ರವರು ಹ್ಯಾಂಡ್ಲರ್‌ ಆಗಿ ಕರ್ತವ್ಯ ನಿರ್ವಹಿಸಿದ್ದರು.

ಈ ಶ್ವಾನವು ಸಿ.ಎ.ಆರ್‌ ಸೌತ್‌ ಆಡುಗೋಡಿಯಲ್ಲಿ ಸ್ಫೋಟಕ ಪತ್ತೆ ಬಗ್ಗೆ 09 ತಿಂಗಳು ಕಠಿಣ ತರಬೇತಿಯನ್ನು ಪಡೆದಿದೆ. ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು, ಗೌರವಾನ್ವಿತ ರಾಷ್ಟ್ರಪತಿಗಳು, ಪ್ರಧಾನ ಮಂತ್ರಿಗಳು, ಮುಖ್ಯಮಂತ್ರಿಗಳು, ವಿದೇಶಿ ಗಣ್ಯರು ಹಾಗೂ ಗಣ್ಯಾತಿಗಣ್ಯರ ಆಗಮನದ ಸಂಧರ್ಭದಲ್ಲಿ ಹಾಗೂ ಏರ್‌ ಶೋ, ಜಿ-20 ಶೃಂಗಸಭೆ, ದತ್ತ ಜಯಂತಿ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್‌ ಪಂದ್ಯಾವಳಿ, ಸಾಗರ ಕವಚ ಹಾಗೂ ಪ್ರತಿನಿತ್ಯದ ಕರ್ತವ್ಯದಲ್ಲಿ ಮಲ್ಪೆ ಬಂದರು, ಕಾಪು ಲೈಟ್‌ಹೌಸ್‌, ಮಣಿಪಾಲ ಯೂನಿವರ್ಸಿಟಿ, ರೈಲ್ವೇ ನಿಲ್ದಾಣ, ನಾಗಾರ್ಜುನ, ಮೈಸೂರು ದಸರಾ, ನ್ಯಾಷನಲ್‌ ನಾರ್ಕೋಟಿಕ್ಸ್‌ ಕಾನ್ಫರೆನ್ಸ್‌, ಬ್ರಹ್ಮಾವರದಲ್ಲಿ ಕಚ್ಚಾ ಬಾಂಬ್‌ ಪತ್ತೆ ಇತ್ಯಾದಿ ಸಂಧರ್ಭಗಳಲ್ಲಿ ಸ್ಪೋಟಕ ಪತ್ತೆ ಕಾರ್ಯದಲ್ಲಿ ಯಾವುದೇ ವಿಧ್ವಂಸಕ ಕೃತ್ಯ ನಡೆಯದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿತ್ತು.

ಈ ಸಮಾರಂಭದಲ್ಲಿ ಪೊಲೀಸ್‌ ಅಧೀಕ್ಷಕರಾದ ಡಾ.ಅರುಣ್‌ ಕೆ. ಐ.ಪಿ.ಎಸ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ಶ್ರೀ ಪರಮೇಶ್ವರ ಹೆಗಡೆ ಕೆ.ಎಸ್.ಪಿ.ಎಸ್, ಉಡುಪಿ ಉಪವಿಭಾಗದ ಪೊಲೀಸ್‌ ಉಪಾಧೀಕ್ಷಕರಾದ ಪ್ರಭು ಡಿ.ಟಿ, ಕೆ.ಎಸ್.ಪಿ.ಎಸ್ ಮತ್ತು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ಉಪಾಧೀಕ್ಷಕರಾದ ತಿಮ್ಮಪ್ಪ ಗೌಡ ಜಿ. ಕೆ.ಎಸ್.ಪಿ.ಎಸ್, ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್‌ ಪಡೆಯ ನಿರೀಕ್ಷಕರಾದ ಎಸ್. ರವಿಕುಮಾರ್‌ ಹಾಗೂ ಜಿಲ್ಲೆಯ ಎಲ್ಲಾ ಅಧಿಕಾರಿ ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!