Saturday, June 6, 2026
Homeತಾಜಾ ಸುದ್ದಿದನಗಳ್ಳರ ಮೇಲೆ ಫೈರಿಂಗ್ ನಡೆಸಿದ ಪೊಲೀಸರು

ದನಗಳ್ಳರ ಮೇಲೆ ಫೈರಿಂಗ್ ನಡೆಸಿದ ಪೊಲೀಸರು

- Advertisement -
- Advertisement -

ಚಿಕ್ಕಮಗಳೂರು: ಕರುಗಳನ್ನು ಕದ್ದು ಪರಾರಿಯಾಗುತ್ತಿದ್ದ ವೇಳೆ ದನಗಳ್ಳರ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.

ಆರೋಪಿಗಳು ಕರುಗಳನ್ನು ಕದ್ದು ವಾಹನದಲ್ಲಿ ಸಾಗಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಲಿಂಗದಹಳ್ಳಿ ಠಾಣೆ ಪೊಲೀಸರು, ವಾಹನ ಅಡ್ಡಗಟ್ಟಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ವಾಹನ ಹತ್ತಿಸಲು ಯತ್ನಿಸಿದ್ದಾರೆ. ಆಗ ಪಿಎಸ್‌ಐ ರಫೀಕ್ ಆರೋಪಿಗಳ ಮೇಲೆ 5 ಸುತ್ತು ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆಯಲ್ಲಿ ಇಬ್ಬರು ಕಾನ್ಸ್ ಟೇಬಲ್ ಗಳು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಆರೋಪಿಗಳು ಪರಾರಿಯಾಗಿದ್ದು, ಶೋಧ ನಡೆಸಲಾಗುತ್ತಿದೆ.

- Advertisement -

Latest News

error: Content is protected !!